ಭೂ ಕಬಳಿಕೆ: ರಾಮಸ್ವಾಮಿಗೆ ಸಾಂಗ್ಲಿಯಾನ ಚಾಲೆಂಜ್
ಬೆಂಗಳೂರು, ಅ.19: ತಮ್ಮ ಕುಟುಂಬದ ವಿರುದ್ಧದ ಭೂ ಕಬಳಿಕೆ ಆರೋಪವನ್ನು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಉಪಾಧ್ಯಕ್ಷ ಡಾ.ಎಚ್.ಟಿ.ಸಾಂಗ್ಲಿಯಾನ ತಳ್ಳಿ ಹಾಕಿದ್ದಾರೆ. ಆರೋಪಗಳನ್ನು ಸಾಬೀತು ಪಡಿಸುವಂತೆ ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.
ನಮ್ಮ ಕುಟುಂಬದಿಂದ ಯಾವುದೇ ಭೂ ಒತ್ತುವರಿಯಾಗಿಲ್ಲ. ಈ ಸಂಬಂಧ ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧ. ಸರ್ಕಾರ ತನಗೆ ಭೂಮಿ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಇಷ್ಟು ವರ್ಷದ ತನ್ನ ಸಾರ್ವಜನಿಕ ಜೀವನದಲ್ಲಿ ಯಾವುದೇ ಭೂಮಿಯನ್ನು ಪರಭಾರೆ ಮಾಡಿಲ್ಲ. ಸರ್ಕಾರದ ಯಾವುದೇ ಆಸ್ತಿಯನ್ನು ಅತಿಕ್ರಮಣ ಮಾಡಿಲ್ಲ. ನನ್ನ ವಿರುದ್ಧ ರಾಮಸ್ವಾಮಿ ಮಾಡಿರುವ ಆರೋಪವನ್ನು ಸಾಬೀತುಪಡಿಸಬೇಕು ಎಂದು ಸಾಂಗ್ಲಿಯಾನ ಚಾಲೆಂಜ್ ಮಾಡಿದ್ದಾರೆ.
ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಉಪಾಧ್ಯಕ್ಷ ಡಾ.ಎಚ್.ಟಿ.ಸಾಂಗ್ಲಿಯಾನ ಕುಟುಂಬವು ನಕಲಿ ದಾಖಲೆ ಸೃಷ್ಟಿಸಿ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದೆ ಎಂದು ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯ ಬಡೇನಹಳ್ಳಿ ಗ್ರಾಮದಲ್ಲಿ ಆರು ಎಕರೆ ಭೂಮಿ(ಗೋಮಾಳದ ಜಾಗ)ಯನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದಾರೆ. ಸಾಂಗ್ಲಿಯಾನ ತಮ್ಮ ಮಗಳು ಎಲಿಜಬೆತ್‌ಯಾನಾ ಸಿಂಟೊ, ಅಳಿಯ ಜಾನ್‌ಪಾಲ್ ಸಿಂಟೊ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಕಾರಿ ಭೂಮಿಯನ್ನು ಕಬಳಿಸಿದ್ದಾರೆ. ಈ ಕಾರ್ಯಕ್ಕೆ ತಹಶೀಲ್ದಾರ್, ಉಪ ವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿಗಳು ಕೈಜೋಡಿಸಿದ್ದಾರೆ ಎಂದು ರಾಮಸ್ವಾಮಿ ಆರೋಪಿಸಿದರು.
ಮತ್ತೊಂದು ಪ್ರಕರಣ: ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ಶ್ರೀನಿವಾಗಿಲು ಗ್ರಾಮದಲ್ಲಿ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು, ಆರ್ಥಿಕವಾಗಿ ಹಿಂದುಳಿದಿರುವವರಿಗಾಗಿ ನಿವೇಶನ ನೀಡಲು ಸರಕಾರ 1984ರಲ್ಲಿ 66 ಎಕರೆ 22 ಗುಂಟೆ ಜಮೀನನ್ನು ಮಂಜೂರು ಮಾಡಿತ್ತು
ಆದರೆ, 2004ರವರೆಗೂ ಯಾವುದೇ ಕಾರ್ಯಚಟುವಟಿಕೆಗಳು ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಾಂತಿನಗರ ಗೃಹ ನಿರ್ಮಾಣ ಸಂಘ ಈ ನಿವೇಶನಗಳನ್ನು ಕಬಳಿಸಲು ಸಂಚು ರೂಪಿಸಿದೆ. ಒಂದೇ ಕುಟುಂಬದವರಿಗೆ 150ಕ್ಕೂ ಹೆಚ್ಚು ನಿವೇಶನಗಳನ್ನು ಮಾರಾಟ ಮಾಡಿರುವುದು ಅನುಮಾನ ಮೂಡಿಸಿದೆ
ಸಾಂಗ್ಲಿಯಾನ ಹಾಗೂ ಶಾಂತಿನಗರ ಗೃಹ ನಿರ್ಮಾಣ ಸಂಘಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೊಳಪಡಿಸಬೇಕು. ಅಲ್ಲದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಮಸ್ವಾಮಿ ಆಗ್ರಹಿಸಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications