ಹುಚ್ಚ ವೆಂಕಟ್‌ಗೆ ಜೈಲೊ? ಬೇಲೊ? ಬುಧವಾರ ತೀರ್ಮಾನ
ಬೆಂಗಳೂರು, ನವೆಂಬರ್, 24: ದಲಿತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಜೈಲು ಸೇರಿರುವ ನಟ, ನಿರ್ದೇಶಕ ಹುಚ್ಚ ವೆಂಕಟ್ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 25ಕ್ಕೆ ಕಾಯ್ದಿರಿಸಲಾಗಿದೆ.
ವೆಂಕಟ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ನವೆಂಬರ್ 25 ಬುಧವಾರ ಅರ್ಜಿ ವಿಚಾರಣೆ ನಡೆಸಲಿರುವುದರಿಂದ ವೆಂಕಟ್ ಬಿಡುಗಡೆಯಾಗುವ ಸಾಧ್ಯತೆಯಿದೆ.[ಅಂಬೇಡ್ಕರ್ 'ಎಕ್ಕಡ' ಅಂದಿದ್ದ ಹುಚ್ಚ ವೆಂಕಟನ ಬಂಧನ]

ಖಾಸಗಿ ಟಿವಿ ಚಾನೆಲ್ ವೊಂದರ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಬಗ್ಗೆ ಕೇಳಲಾದ ಪ್ರಶ್ನೆಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದವು. ವೆಂಕಟ್ ಅವರ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದವು. ಅಲ್ಲದೇ ಈ ಬಗ್ಗೆ ಜ್ಞಾನ ಭಾರತಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ವೆಂಕಟ್ ವರನ್ನು ನಂತರ ಪೊಲೀಸರು ವಶಕ್ಕೆ ಪಡೆದಿದ್ದರು.[ಯಾರೀ ಹುಚ್ಚ ವೆಂಕಟ್?]
ವೆಂಕಟ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ನ್ಯಾಯಾಲಯ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿತ್ತು. ಬಿಗ್ ಬಾಸ್ ರಿಯಾಲಿಟಿ ಶೋ ನಂತರ ವೆಂಕಟ್ ಎಲ್ಲಾ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದ್ದರು.












Click it and Unblock the Notifications