Get Updates
Get notified of breaking news, exclusive insights, and must-see stories!

ಬೆಂಗಳೂರಿನ ಪ್ರಮುಖ ರೈಲು ನಿಲ್ದಾಣದಲ್ಲಿ ಫುಲ್ ಹೈಡ್ರಾಮಾ: ವಿಡಿಯೋ ವೈರಲ್

ಬೆಂಗಳೂರಿನ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾಗಿರುವ ಯಶವಂತಪುರ ರೈಲು ನಿಲ್ದಾಣದಲ್ಲಿ ಹೈಡ್ರಾಮಾವೇ ನಡೆದಿದ್ದು, ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪ್ರಮುಖ ನಿಲ್ದಾಣಗಳಲ್ಲಿ ಒಂದಾಗಿರುವ ಯಶವಂತಪುರ ರೈಲು ನಿಲ್ದಾಣದಲ್ಲಿ ನಿತ್ಯವೂ ಸಾವಿರಾರು ಜನ ಸೇರುತ್ತಾರೆ. ಈ ನಿಲ್ದಾಣದಲ್ಲಿ ಸೃಷ್ಟಿಯಾದ ಗೊಂದಲದಿಂದ ರೈಲು ಪ್ರಯಾಣಿಕರಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಇಷ್ಟಕ್ಕೂ ಈ ನಿಲ್ದಾಣದಲ್ಲಿ ಆಗಿದ್ದೇನು ಹಾಗೂ ವೈರಲ್ ವಿಡಿಯೋದಲ್ಲಿ ಏನಿದೆ ಎನ್ನುವ ವಿವರ ನೋಡೋಣ.

ನಗರದಲ್ಲಿ ಮೆಜೆಸ್ಟಿಕ್‌ನ ನಂತರ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣವೂ ಪ್ರಮುಖವಾಗಿದೆ. ಆದರೆ ಸೋಮವಾರ ಸೃಷ್ಟಿಯಾದ ಗೊಂದಲವು ರೈಲುಗಳಲ್ಲಿ ಇನ್ನಷ್ಟು ಭದ್ರತೆ ಹೆಚ್ಚಿಸಬೇಕು ಎನ್ನುವ ಕೂಗಿಗೆ ಕಾರಣವಾಗಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ಕೆಲವು ಪುಂಡರು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದು, ರೈಲಿನೊಳಗೆ ಎಳೆದೊಯ್ದಿದ್ದಾರೆ. ಇದು ಭಾರೀ ಆಕ್ರೋಶ ಹಾಗೂ ಕೋಲಾಹಲಕ್ಕೆ ಕಾರಣವಾಗಿದೆ.

Huge Hydrama Spotted at Major Bengaluru Railway Station Shocking Video Goes Viral

ಯಶವಂತಪುರ ರೈಲು ನಿಲ್ದಾಣದಲ್ಲಿ ಗೋವಾಕ್ಕೆ ಹೋಗುವ ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಯಾಗಿತ್ತು. ಆದರೆ ರೈಲು ಸಂಚಾರ ಪ್ರಾರಂಭಿಸುವ ಸಂದರ್ಭದಲ್ಲಿ ರೈಲಿನ ಚೈನ್ ಅನ್ನು ಪದೇ ಪದೇ ಎಳೆದು, ಕೆಲವರು ಉದ್ದೇಶಪೂರ್ವಕವಾಗಿ ತೊಂದರೆ ಕೊಟ್ಟಿದ್ದಾರೆ ಮದ್ಯದ ಅಮಲಿನಲ್ಲಿದ್ದ ಕೆಲವರು ಆರ್‌ಪಿಎಫ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವ ಮೂಲಕ ಗಲಾಟೆ ಸೃಷ್ಟಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಸಿಬ್ಬಂದಿ ಬಂಧಿಸಿದೆ.

ಕುಡಿದ ನಶೆಯಲ್ಲಿದ್ದ ಕೆಲವರು ಪದೇ ಪದೇ ಚೈನ್ ಎಳೆದು ಕೆಲ ಪ್ರಯಾಣಿಕರೊಂದಿಗೂ ಗಲಾಟೆ ಮಾಡಿದ್ದಾರೆ. ಚೈನ್ ಎಳೆಯುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕಾಗಿ ಆರ್ಪಿಎಫ್ ಸಿಬ್ಬಂದಿ ಮೇಲೆ ಪುಂಡರು ಹಲ್ಲೆ ನಡೆಸಿದ್ದರು. ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ಸಂಖ್ಯೆ 17309 ಹೊರಡುವ ಸಮಯದಲ್ಲಿ, ಎಸ್ 3 ಕೋಚ್‌ನಲ್ಲಿ ಪುಂಡರ ಗ್ಯಾಂಗ್ ಚೈನ್ ಎಳೆದಿದ್ದರು ಎಂದು ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್‌ನಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಿಸಲು ಕೋಚ್‌ಗೆ ಹೋಗಿದ್ದಾರೆ. ವಿಚಾರಿಸುವ ಸಂದರ್ಭದಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ 14 ಜನ ಪ್ರಯಾಣಿಕರ ಗುಂಪು ಆರ್‌ಪಿಎಫ್ ಸಿಬ್ಬಂದಿ ಜಗಳಕ್ಕೆ ಇಳಿದಿದ್ದು, ಹಲ್ಲೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆರ್‌ಪಿಎಫ್‌ ಸಿಬ್ಬಂದಿ ಧಾವಿಸಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸೋಮವಾರದಿಂದಲೂ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಲಿದ್ದೇವೆ: ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಅಧಿಕಾರಿಗಳು, ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಆರ್‌ಪಿಎಫ್ ಸಿಬ್ಬಂದಿಯನ್ನು ದೈಹಿಕವಾಗಿ ಹಲ್ಲೆ ಮಾಡಿರುವ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದ್ದು, ಮೂವರ ಮೇಲೆ ಕ್ರಮ ಜರುಗಿಸಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+