ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಕೊತ್ತನೂರು ಕೆರೆಯಲ್ಲಿ ಮೀನುಗಳ ಮಾರಣಹೋಮ- ಕಾರಣವೇನು?

|
Google Oneindia Kannada News

ಬೆಂಗಳೂರು, ಆಗಸ್ಟ್‌ 23: ಐದು ತಿಂಗಳಲ್ಲಿ ಎರಡನೇ ಬಾರಿಗೆ ದಕ್ಷಿಣ ಬೆಂಗಳೂರಿನ ಕೊತ್ತನೂರು ಕೆರೆಯಲ್ಲಿ ನೂರಾರು ಸತ್ತ ಮೀನುಗಳು ತೇಲುತ್ತಿವೆ.

ಏಪ್ರಿಲ್‌ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿದ್ದು, ಪರಿಸ್ಥಿತಿಯನ್ನು ಗಮನಿಸಿದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ), ತಕ್ಷಣವೇ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಸೂಚನೆ ನೀಡಿತ್ತು.

ಬಿಡದಿಯ ನಲ್ಲಿಗುಡ್ಡೆ ಕೆರೆಯಲ್ಲಿ ಮರುಕಳಿಸಿದ ಜಲವೈಭವ!ಬಿಡದಿಯ ನಲ್ಲಿಗುಡ್ಡೆ ಕೆರೆಯಲ್ಲಿ ಮರುಕಳಿಸಿದ ಜಲವೈಭವ!

ಕೆರೆಗೆ ಕೊಳಚೆ ನೀರು ಸೇರುತ್ತಿರುವುದು ಮೀನುಗಳ ಸಾವಿಗೆ ಪ್ರಮುಖ ಕಾರಣ ಎಂದು ಸುತ್ತಮುತ್ತಲಿನ ನಿವಾಸಿಗಳು ತಿಳಿಸಿದ್ದಾರೆ. ಆರಂಭದಲ್ಲಿ, ಕೊಳಚೆನೀರು ಜೌಗು ಪ್ರದೇಶಕ್ಕೆ ಪ್ರವೇಶಿಸಲು ಪ್ರಾರಂಭಿಸಿತು. ಇದರ ಪರಿಣಾಮವಾಗಿ ತಗ್ಗು ಪ್ರದೇಶದಲ್ಲಿ ಮೀನುಗಳು ಸಾಯುತ್ತಿವೆ. ಈಗ ಕೊಳಚೆ ನೀರು ದೊಡ್ಡ ಜಲಮೂಲ ಕೆರೆಗೂ ಸೇರುತ್ತಿದ್ದು, ಹೆಚ್ಚಿನ ಮೀನುಗಳಿಗೆ ಮಾರಕವಾಗಿ ಪರಿಣಮಿಸಿದೆ ಎಂದು ಆಕ್ಷನ್ ಏಡ್ ಅಸೋಸಿಯೇಷನ್‌ನ ರಾಘವೇಂದ್ರ ಬಿ ಪಾಚಾಪುರ ಹೇಳಿದರು.

Hundreds of Fish Die in Kothanuru Lake, Know Why

ಮಾರ್ಚ್‌ನಲ್ಲಿಯೇ ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಲಾಗಿತ್ತು. ನಾವು ಘಟನೆಯ ಬಗ್ಗೆ ಅಧಿಕಾರಿಗಳಿಗೆ ಹಲವಾರು ಬಾರಿ ಮಾಹಿತಿ ನೀಡಿದ್ದೇವೆ. ಆದರೆ ಬಿಬಿಎಂಪಿಯಿಂದ ಕಾಸ್ಮೆಟಿಕ್ ಕ್ಲೀನಿಂಗ್ ಕಾರ್ಯವಿಧಾನಗಳನ್ನು ಹೊರತುಪಡಿಸಿ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದರು.

ಗದಗ: ಕೆರೆ ಕಟ್ಟೆ ಒಡೆದು 100ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರುಗದಗ: ಕೆರೆ ಕಟ್ಟೆ ಒಡೆದು 100ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಕೆರೆಗೆ ಕೊಳಚೆ ನೀರು ಹರಿಸದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಾವು ಕೆರೆಗಳ ನೀರಿನ ಗುಣಮಟ್ಟವನ್ನು ಮಾತ್ರ ಮೇಲ್ವಿಚಾರಣೆ ಮಾಡಬಹುದು ಹಾಗೂ ಕ್ರಮ ಕೈಗೊಳ್ಳಲು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಬಹುದು. ಆದ್ಯಾಗೂ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿಗೆ ಪತ್ರ ಬರೆದಿದ್ದೇವೆ ಎಂದು ಕೆಎಸ್‌ಪಿಸಿಬಿ ಹಿರಿಯ ಅಧಿಕಾರಿಗಳು ಡಿಎಚ್‌ಗೆ ತಿಳಿಸಿದ್ದಾರೆ.

Hundreds of Fish Die in Kothanuru Lake, Know Why

ಆದರೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಕೆರೆಗೆ ಕೊಳಚೆ ನೀರು ಸೇರುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ಏಪ್ರಿಲ್‌ನಲ್ಲಿ ಘಟನೆ ನಡೆದಾಗ ಕೊಳಚೆ ನೀರು ಕೆರೆಗಳಿಗೆ ಸೇರುತ್ತಿತ್ತು. ನಾವು ಅಂದಿನಿಂದ ನಿರಂತರವಾಗಿ ಈ ಸಮಸ್ಯೆಯನ್ನು ಮೇಲ್ವಿಚಾರಣೆ ಮಾಡಿದ್ದೇವೆ ಮತ್ತು ಕೊಳಚೆ ನೀರು ಕೆರೆಗೆ ಸೇರುವುದನ್ನು ತಡೆದಿದ್ದೇವೆ ಎಂದು ಹಿರಿಯ ಮಂಡಳಿ ಇಂಜಿನಿಯರ್ ಹೇಳಿದ್ದಾರೆ.

English summary
For the second time in five months, hundreds of dead fish are floating dead in the Kothanur lake in south Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X