ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಹೆಂಡತಿಯಿಂದ ಒತ್ತಡ, ದೂರು ನೀಡಿದ ಪತಿ
ಬೆಂಗಳೂರು, 05: ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ನನಗನ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಪತಿಯೋಬ್ಬ ಪತ್ನಿ ಮೇಲೆ ದೂರು ದಾಖಲಿಸಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ನ ಅಶೋಕಪುರಂನಲ್ಲಿ ನಡೆದಿದೆ.
ತನ್ನ ಹಾಗೂ ತನ್ನ ತಂದೆ ತಾಯಿ, ಸಹೋದರನಿಗೆ ಮತಾಂತರ ಆಗಲು ಒತ್ತಾಡ ಹೇರುತ್ತಿದ್ದಾರೆ ಎಂದು ಆರೋಪಿಸಿ 28 ವರ್ಷದ ದೀಪಕ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದಾರೆ.
ದೂರಿನ ಹಿನ್ನೆಲೆ ತನಿಖೆ ನಡೆಸುವಂತೆ ಸಿಟಿ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ನ ಅಶೋಕಪುರಂನಲ್ಲಿ ವಾಸವಾಗಿರುವ ದೀಪಕ್ ಎಂಬಾತ ತನ್ನ 26 ವರ್ಷದ ಪತ್ನಿ ಸುನೀತಾ ಗ್ರೇಸಿ ಸೇರಿ ಐವರ ವಿರುದ್ಧ ದೂರು ದಾಖಲಿಸಿದ್ದಾರೆ. ದೀಪಕ್ ಮತ್ತು ಗ್ರೇಸಿ ಅವರು ಜನವರಿ 18, 2019 ರಂದು ಎಲೆಕ್ಟ್ರಾನಿಕ್ಸ್ ಸಿಟಿಯ ದೇವಸ್ಥಾನದಲ್ಲಿ ಮದುವೆಯಾಗಿದ್ದರು.
ಇವರಿಬ್ಬರು ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಾರೆ. ದೀಪಕ್ ಕೆಲಸದ ನಿಮಿತ್ತ ಬೇರೆ ಬೇರೆ ರಾಜ್ಯಗಳಿಗೆ ಹೋಗುತ್ತಿರುತ್ತಾರೆ, ಈ ಬಗ್ಗೆ ಹೆಂಡತಿಗೆ ತಿಳಿಸಿದ್ದರೂ ಕೂಡ ಆಕೆ ಪತಿಯ ಬಗ್ಗೆ ನಾಪತ್ತೆ ದೂರು ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ತಾನು ಹಣ ನೀಡಿದರೂ ಕೂಡ ಹೆಂಡತಿ ಬಾಡಿಗೆ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಪತಿಯ ಹೆಸರನ್ನು ಬಳಸಿ ಸಾಲ ಪಡೆದಿರುವ ಆರೋಪವೂ ಅವರ ಮೇಲಿದೆ. ಸಾಲವನ್ನು ವಾಪಸ್ ನೀಡಿ ಎಂದುಜನ ಪೀಡಿಸಲು ಆರಂಭಿಸಿದಾಗ ತನ್ನ ಗಂಡನ ಕೆಲಸದ ಸ್ಥಳಕ್ಕೆ ಕಳುಹಿಸಿ ತೆಗೆದುಕೊಳ್ಳುವಂತೆ ಹೇಳುತ್ತಾರೆ ಎಂಬ ಆರೋಪ ಮಾಡಿದ್ದಾರೆ.
ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ಖಾಸಗಿ ದೂರಿನಲ್ಲಿ ದೀಪಕ್, ತನ್ನ ಪತ್ನಿ ತನಗೆ, ತನ್ನ ಹೆತ್ತವರಿಗೆ ಮತ್ತು ಸಹೋದರನನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಮತಾಂತರವಾಗದಿದ್ದರೆ ಅವರ ಮೇಲೆ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಆಕೆಯ ಪೋಷಕರು ಮತ್ತು ಇತರ ಕುಟುಂಬ ಸದಸ್ಯರು ಆಕೆಗೆ ಬೆಂಬಲ ನೀಡಿದ್ದಾರೆ. ತನ್ನ ಹೆಂಡತಿ ನನ್ನ ಹೆತ್ತವರ ಮನೆಗೆ ನುಗ್ಗಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
"ದಂಪತಿ ನಡುವೆ ಸೌಹಾರ್ದಯುತ ಸಂಬಂಧವಿಲ್ಲ. ಪತಿ ಕೆಲಸದ ಮೇಲೆ ಹೊರಗೆ ಹೋದಾಗಲೂ ಗ್ರೇಸಿ ಮೂರು ನಾಪತ್ತೆ ದೂರುಗಳನ್ನು ದಾಖಲಿಸಿದ್ದಾರೆ. ದೀಪಕ್ ಹೆಸರು ಬಳಸಿ ಹಲವು ಕಡೆಗಳಲ್ಲಿ ಹಣ ಸಾಲ ಪಡೆದಿರುವ ಬಗ್ಗೆ ಆತನು ಕಂಗಾಲಾಗಿದ್ದಾನೆ. ಹೀಗಾಗಿ ನಗರದ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಬಲವಂತದ ಮತಾಂತರದ ಬಗ್ಗೆ ದೀಪಕ್ ಅವರ ಆರೋಪ ಸಾಭೀತಾದರೇ, ಅದನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗುವುದು" ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಗಳಲ್ಲಿ ಒಬ್ಬರು ತಿಳಿಸಿದ್ದಾರೆ.
(ಮಾಹಿತಿ ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್)
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications