ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ಕಾಂಗ್ರೆಸ್‌ನಲ್ಲಿಯೇ ಇದ್ದೇನೆ : ರಾಮಲಿಂಗಾ ರೆಡ್ಡಿ

|
Google Oneindia Kannada News

ಬೆಂಗಳೂರು, ಜುಲೈ 07 : 'ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ನಾನಿನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ' ಎಂದು ಮಾಜಿ ಸಚಿವ, ಬಿ.ಟಿ.ಎಂ.ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ ಅವರು ಹೇಳಿದರು.

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, 'ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಈಗಲೂ ಪಕ್ಷವನ್ನು ಬಿಡುಲು ಇಷ್ಟವಿಲ್ಲ. ಒಲ್ಲದ ಮನಸ್ಸಿನಿಂದ, ಅನಿವಾರ್ಯವಾಗಿ ರಾಜೀನಾಮೆ ನೀಡಿದ್ದೇನೆ' ಎಂದರು.

ಸರ್ಕಾರ ಉಳಿಸಲು ಎಚ್.ಡಿ.ಕುಮಾರಸ್ವಾಮಿ ಮುಂದೆ 2 ಆಯ್ಕೆಸರ್ಕಾರ ಉಳಿಸಲು ಎಚ್.ಡಿ.ಕುಮಾರಸ್ವಾಮಿ ಮುಂದೆ 2 ಆಯ್ಕೆ

'ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಇನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಮುಂದಿನ ತೀರ್ಮಾನವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುತ್ತದೆ' ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ರಾಜಕೀಯ ಹೈಡ್ರಾಮ : ಇಂದು ಸಂಜೆ ಬೆಂಗಳೂರಿಗೆ ಕುಮಾರಸ್ವಾಮಿ ವಾಪಸ್ರಾಜಕೀಯ ಹೈಡ್ರಾಮ : ಇಂದು ಸಂಜೆ ಬೆಂಗಳೂರಿಗೆ ಕುಮಾರಸ್ವಾಮಿ ವಾಪಸ್

I am in Congress resigned for MLA post says Ramalinga Reddy

'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಶನಿವಾರ ರಾತ್ರಿ ನನಗೂ ಕರೆ ಮಾಡಿ ಮಾತುಕತೆ ನಡೆಸಿದರು. ಅವರಿಗೆ ಏನನ್ನೂ ಹೇಳಬೇಕೋ ಅದನ್ನು ಹೇಳಿದ್ದೇನೆ' ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

ಕುಮಾರಸ್ವಾಮಿ ಅವರಿಗೆ ಮತ್ತೆ ಕೈ ಕೊಡಲಿದೆಯೇ ಅವೇ 5 ಅಂಶಗಳು?ಕುಮಾರಸ್ವಾಮಿ ಅವರಿಗೆ ಮತ್ತೆ ಕೈ ಕೊಡಲಿದೆಯೇ ಅವೇ 5 ಅಂಶಗಳು?

ಶನಿವಾರ ಕಾಂಗ್ರೆಸ್‌ನ 9 ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದರು. ಇವರಲ್ಲಿ ರಾಮಲಿಂಗಾ ರೆಡ್ಡಿ ಅವರು ಸಹ ಇದ್ದಾರೆ. ರಾಜೀನಾಮೆ ನೀಡಿರುವ ಶಾಸಕರು ಮುಂಬೈಗೆ ತೆರಳಿದ್ದಾರೆ. ಆದರೆ, ಮುನಿರತ್ನ (ರಾಜರಾಜೇಶ್ವರಿ ನಗರ), ರಾಮಲಿಂಗಾ ರೆಡ್ಡಿ (ಬಿ.ಟಿ.ಎಂ. ಲೇಔಟ್) ಅವರು ಬೆಂಗಳೂರಿನಲ್ಲಿಯೇ ಇದ್ದಾರೆ.

English summary
Former minister and BTM layout Congress MLA Ramalinga Reddy on July 7, 2019 said that i am in Congress party, resigned for only MLA post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X