ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಗ್ರಾಮಾಂತರ ಟಿಕೆಟ್ ಗೆ ಲಾಬಿ ಮಾಡಿಲ್ಲ: ಯೋಗೇಶ್ವರ್

|
Google Oneindia Kannada News

ಬೆಂಗಳೂರು, ಮಾರ್ಚ್ 19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸುವುದು ಬಹುತೇಕ ಖಚಿತ ಎಂಬ ಸುದ್ದಿಯಿದೆ. ಆದರೆ, ಈ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ ಎಂದು ಸಿಪಿ ಯೋಗೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಕೇಂದ್ರ ಸಂಸದೀಯ ಮಂಡಳಿಗೆ ನೀಡಿರುವ ಅಭ್ಯರ್ಥಿಗಳ ಪಟ್ಟಿ ಹಾಗೂ ಇತ್ತೀಚೆಗೆ ಬಿಜೆಪಿ ಹೈಕಮಾಂಡ್ ಗೆ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ನೀಡಿದ ಅಭ್ಯರ್ಥಿಗಳ ಪಟ್ಟಿಯಲ್ಲೂ ಯೋಗೇಶ್ವರ್ ಹೆಸರಿದೆ.

ಲೋಕಸಭೆ ಚುನಾವಣೆ 2019: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಪರಿಚಯ ಲೋಕಸಭೆ ಚುನಾವಣೆ 2019: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಪರಿಚಯ

'ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಾನು ಯಾವುದೇ ಪೂರ್ವ ತಯಾರಿಗಳನ್ನು ಮಾಡಿಕೊಂಡಿಲ್ಲ.

I am not contesting Lok Sabha elections, not lobbying for ticket : CP Yogeshwar

ಹೀಗಾಗಿ ನಾನು ಟಿಕೆಟ್ ಬಯಸಿಲ್ಲ ಎಂದು ಸಿ.ಪಿ. ಯೋಗೇಶ್ವರ್ ಅವರು ಸುದ್ದಿವಾಹಿನಿ ಜತೆ ಮಾತನಾಡಿದ "20 ವರ್ಷಗಳಿಂದ ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿದ್ದೇನೆ. ಆದರೆ, ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇನೆ. ಇನ್ನು ನಾಲ್ಕು ವರ್ಷ ಕೆಲಸ ಮಾಡಿ ಮತ್ತೆ ವಿಧಾನಸಭೆಗೆ ಸ್ಪರ್ಧಿಸಬೇಕು ಎಂಬುದು ನನ್ನ ಇಚ್ಛೆ. ಹಾಗಾಗಿ ನಾನು ಲೋಕಸಭೆ ಚುನಾವಣೆಗೆ ಟಿಕೆಟ್​ ಕೇಳಿಲ್ಲ. ಒಂದು ವೇಳೆ ಹೈಕಮಾಂಡ್​ ಸ್ಪರ್ಧೆಗೆ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ. ಬೇರೆ ಯಾರಿಗೇ ಟಿಕೆಟ್ ನೀಡಿದರೂ ಚನ್ನಪಟ್ಟಣದಿಂದ ಹೆಚ್ಚಿನ ಮತಗಳನ್ನು ತಂದು ಕೊಡುತ್ತೇನೆ" ಎಂದಿದ್ದಾರೆ.

ಆ ಎರಡು ಆಘಾತದಿಂದ ಸಿ.ಪಿ.ಯೋಗೇಶ್ವರ್ ಹೊರಬಂದಿಲ್ವಾ?ಆ ಎರಡು ಆಘಾತದಿಂದ ಸಿ.ಪಿ.ಯೋಗೇಶ್ವರ್ ಹೊರಬಂದಿಲ್ವಾ?

"ಡಿ.ಕೆ ಶಿವಕುಮಾರ್ ಒಬ್ಬ ಭ್ರಷ್ಟ ರಾಜಕಾರಣಿ, ಡಿ.ಕೆ. ಸುರೇಶ್​ ಅವರನ್ನು ದುರಹಂಕಾರಿ, ದರ್ಪದ ವ್ಯಕ್ತಿ, ಈ ಬಾರಿ ಚುನಾವಣೆಯಲ್ಲಿ ಹಣ, ತೋಳ್ಬಲದ ಆಟ ನಡೆಯುವುದಿಲ್ಲ ಎಂದು ಹೇಳಿದರು.

English summary
I am not contesting Lok Sabha elections, not lobbying for Bangalore rural LS constituency ticket said former MLA CP Yogeshwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X