ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಿಳೆ ಮೇಲೆ ದರ್ಪ: ಕ್ಷಮೆ ಕೇಳಲು ಸಿದ್ಧ ಎಂದು ಶಾಸಕ ಅರವಿಂದ ಲಿಂಬಾವಳಿ

|
Google Oneindia Kannada News

ಬೆಂಗಳೂರು ಸೆಪ್ಟೆಂಬರ್ 3: ಅಹವಾಲು ಹೇಳಿಕೊಳ್ಳಲು ಬಂದ ಮೇರಿ ಸಗಾಯ್ ಎಂಬ ಮಹಿಳೆಯ ಮೇಲೆ ದರ್ಪ ತೋರಿದ ವರ್ತನೆಗೆ ಖಂಡನೆ ವ್ಯಕ್ತವಾಗುತ್ತಿದ್ದಂತೆ ಶಾಸಕ ಅರವಿಂದ್ ಲಿಂಬಾವಳಿ ದಾರಿಗೆ ಬಂದಂತೆ ಕಾಣಿಸುತ್ತಿದೆ. ಮಹಿಳೆಗೆ ತಾವು ಕ್ಷಮೆ ಕೇಳಲು ಸಿದ್ಧ ಎಂದು ಅವರು ಟ್ವೀಟ್ ಮಾಡಿದ್ದಾರೆ.

'ಈ ಬಗ್ಗೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ. ಆದರೆ ನಿಮ್ಮ ಪಕ್ಷದ ಇದೇ ಕಾರ್ಯಕರ್ತೆ ರೂತ್ ಸಗಾಯ್ ಮೇರಿ ಎಷ್ಟೋ ವರ್ಷಗಳಿಂದ ರಾಜಕಾಲುವೆ ಒತ್ತುವರಿ ಮಾಡಿ, ಜನರಿಗೆ ಸಮಸ್ಯೆಯುಂಟು ಮಾಡಿದ್ದಾರಲ್ಲ, ಅದನ್ನು ಖಾಲಿ ಮಾಡಲು ಹೇಳಿ. ನಿಮ್ಮ ಕಾರ್ಯಕರ್ತೆಯ ಮೊಂಡುತನವನ್ನು ಇಲ್ಲಿಗೇ ನಿಲ್ಲಿಸಲು ಹೇಳಿ' ಎಂದು ಶಾಸಕ ಅರವಿಂದ್ ಲಿಂಬಾವಳಿ ಟ್ವೀಟ್ ಮಾಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು?

ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ಶಾಸಕ ಅರವಿಂದ್ ಲಿಂಬಾವಳಿ ದರ್ಪ ತೋರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ವಿರುದ್ಧ ಕಾಂಗ್ರೇಸ್ ಸರಣಿ ಟ್ವೀಟ್‌ಗಳ ಮೂಲಕ ಅರವಿಂದ ಲಿಂಬಾವಳಿಯ ವರ್ತನೆಯ ವಿರುದ್ಧ ಆಕ್ರೋಶ ಹೊರಹಾಕಿದೆ. ಶಾಸಕರ ವರ್ತನೆಯನ್ನು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ ಎಂದು ಕಾಂಗ್ರೇಸ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.

ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 'ಮಹಿಳೆಗೆ ನಿಂದಿಸಿದ್ದರು ಮಾಧುಸ್ವಾಮಿ, ಮಹಿಳೆಗೆ ಹಲ್ಲೆ ಮಾಡಿದ್ದರು ಸಿದ್ದು ಸವದಿ, ಉದ್ಯೋಗ ಕೇಳಿದಾಕೆಯನ್ನು ಮಂಚ ಹತ್ತಿಸಿದ್ದರು ರಮೇಶ್ ಜಾರಕಿಹೊಳಿ, ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದಿದ್ದರು ಆರಗ ಜ್ಞಾನೇಂದ್ರ, ಮಹಿಳೆಯ ಮೇಲೆ ದರ್ಪ ಮೆರೆದರು ಅರವಿಂದ್ ಲಿಂಬಾವಳಿ, ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ? ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿ ಕಾರಿದೆ.

I am ready to apologize Ruth Sagai Mary for Misbehaving with her says Aravind Limbavali

ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ.. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ? ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ? ನಳಿನ ಕಟೀಲ್ ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ? ಎಂದು ಕಾಂಗ್ರೆಸ್ ಕಟುವಾಗಿ ಪ್ರಶ್ನೆ ಮಾಡಿದೆ. ಶಾಸಕರ ವರ್ತನೆ ವಿರುದ್ಧ ಪ್ರತಿಭಟನೆ ಕೂಡ ನಡೆಸಲಾಯಿತು.

ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಅವರ ಮಹಿಳೆ ಮೇಲಿನ ದರ್ಪ ಪ್ರದರ್ಶನದ ವಿರುದ್ಧ ಖಂಡಿಸಿ ಇಂದು 3/09/2022ರ ಮಧ್ಯಾಹ್ನ 3 ಗಂಟೆಗೆ ಕೆಪಿಸಿಸಿ ಕ್ವೀನ್ಸ್ ರಸ್ತೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ವಿಷಯ ಗಂಭೀರತೆ ಪಡೆದುಕೊಳ್ಳುತ್ತಿದ್ದಂತೆ ಶಾಸಕರ ಅರವಿಂದ ಲಿಂಬಾವಳಿ ತಾವು ಕ್ಷಮೆ ಕೇಳುವುದಾಗಿ ಟ್ವೀಟ್ ಮಾಡಿದ್ದಾರೆ.

English summary
I am ready to apologize Ruth Sagai Mary. But this same worker of your party, has occupied Raja Kaluve for many years and caused problems to people ask her to vacate it says BJP MLA Aravind Limbavali.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X