ಮೋದಿ ವಿರುದ್ದ ಹೋರಾಡುವ ಶಕ್ತಿ ಇನ್ನೂ ನನಗಿದೆ: ದೇವೇಗೌಡ
ಬೆಂಗಳೂರು, ಏ 9: ಉತ್ತರ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಭೈರೇಗೌಡರು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ನಿಮ್ಮ ಪರವಾಗಿ ಹಗಲಿರುಳು ಕೆಲಸ ಮಾಡಬಲ್ಲ ಬುದ್ದಿವಂತ ಯುವ ನಾಯಕ ನಿಮಗೆ ಸಿಕ್ಕಿದ್ದಾರೆ. ಮತದಾರರಿಗೆ ಕೈಮುಗಿದು ಕೇಳುತ್ತೇನೆ. ದಯಮಾಡಿ ಕೃಷ್ಣ ಭೈರೇಗೌಡರಿಗೆ ಮತ ನೀಡಿ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಮನವಿ ಮಾಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೃಷ್ಣ ಭೈರೇಗೌಡರ ಪರವಾಗಿ ದೇವೇಗೌಡ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಮತಯಾಚನೆ ಮಾಡಿದರು.
ಜಕ್ಕೂರು ಏರೋಡ್ರೋಮ್ ಎದುರಿನ ಮೈದಾನದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ದೇವೇಗೌಡರು, ಐದು ವರ್ಷಗಳಲ್ಲಿ ಮೋದಿ ಏನು ಮಾಡಿದ್ದಾರೆ ಎಂಬುದನ್ನ ವಿಮರ್ಶೆ ಮಾಡಿ. ಅವರು ಕೊಟ್ಟಂತಹ ಆಶ್ವಾಸನೆ ಏನು, ಅವು ಎಷ್ಟರ ಮಟ್ಟಿಗೆ ಈಡೇರಿವೆ ಎಂಬುದನ್ನು ತಿಳಿದುಕೊಳ್ಳಿ ಎಂದಿದ್ದಾರೆ.

ಮೋದಿ ಅವರಿಂದ ಬಡವರಿಗೆ ಅನುಕೂಲವಾಗುವ ಯಾವ ಯೋಜನೆಯು ಜಾರಿಯಾಗಲಿಲ್ಲ. ಹೀಗಾಗಿಯೇ ಕಳೆದ ಬಾರಿ 295 ಸ್ಥಾನಗಳನ್ನು ಪಡೆದಂತೆ ಈ ಬಾರಿ ಆಗುವುದಿಲ್ಲ ಎಂಬುದು ಬಿಜೆಪಿ ಪಕ್ಷಕ್ಕೆ ಗೊತ್ತಿದೆ. ಅದಕ್ಕಾಗಿ ಪುಲ್ವಾಮಾ ಘಟನೆಗೆ ಮತ್ತೊಂದು ಸ್ವರೂಪ ಕೊಟ್ಟು, ಐದು ವರ್ಷಗಳಲ್ಲಿ ದೇಶದ ರಕ್ಷಣೆಗೆ ಬೇಕಾದ ಸಾಮಾಗ್ರಿಗಳನ್ನ ಜೋಡಿಸಿದ್ದೇವೆ. ರಷ್ಯಾ ಚೀನಾಗಿಂತ ಮುಂದೆ ಹೋಗಿದ್ದೇವೆ.
ಆಕಾಶದಲ್ಲಿ ಯುದ್ಧ ಮಾಡುತ್ತೇವೆ ಎನ್ನುವ ಮಾತುಗಳನ್ನಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಮನಮಹೋನ್ ಸಿಂಗ್ ಕಾಲದಲ್ಲಿ ಯಾವೆಲ್ಲಾ ಕ್ಷಿಪಣಿಗಳು ಉಡಾವಣೆಯಾಗಿವೆ ಎಂಬುದು ಜನರಿಗೆ ಗೊತ್ತು. ಆದರೆ ಎಲ್ಲವನ್ನೂ ನಾವೇ ಮಾಡಿರುವುದು ಎಂದು ಮೋದಿ ಹೇಳಿಕೊಳ್ಳುತ್ತಾರೆಂದು ದೇವೇಗೌಡ್ರು ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸಂಸದರಲ್ಲಿ ಯಾರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿವೆ?
ಅವರೆನೇ ಹೇಳಿಕೊಂಡರೂ ಸಮೀಕ್ಷೆಗಳನ್ನು ನೋಡಿದಾಗ ಅತಂತ್ರ ಸ್ಥಿತಿ ಬರುತ್ತದೆ ಎಂಬುದು ವ್ಯಕ್ತವಾಗಿದೆ. ಮತ್ತೆ ನನಗೆ ಪಾರ್ಲಿಮೆಂಟ್ ಗೆ ಹೋಗೋ ಅವಕಾಶ ಸಿಕ್ಕಿದರೆ ಮೋದಿಯ ಎದುರು ಹೋರಾಡುವ ಶಕ್ತಿ ನನಗಿದೆ. ರಾಜ್ಯದಲ್ಲಿ 18 ರಿಂದ 20 ಸ್ಥಾನ ನಾವು ಗೆದ್ದರೆ ಸಮ್ಮಿಶ್ರ ಸರ್ಕಾರಕ್ಕೊಂದು ಅರ್ಥ ಬರುತ್ತದೆ ಎಂದು ದೇವೇಗೌಡರು ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications