• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇದಾರನಾಥದ​ ಶಂಕರಾಚಾರ್ಯರ ಮೂರ್ತಿ ನೋಡಬೇಕೆನಿಸಿದೆ; ಮೋದಿಗೆ ಪತ್ರ ಬರೆದ ದೇವೇಗೌಡರು

|
Google Oneindia Kannada News

ಬೆಂಗಳೂರು, ನವೆಂಬರ್ 6: 'ನೀವು (ಪ್ರಧಾನಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಆದಿ ಗುರು ಶ್ರೀ ಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನನಗೆ ನೋಡಬೇಕು ಅನಿಸಿದೆ' ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಪತ್ರದ ಮೂಲಕ ತಮ್ಮ ಆಸೆ ತಿಳಿಸಿದ್ದಾರೆ.

ಶಂಕರಾಚಾರ್ಯರ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ದೇವೇಗೌಡರು ಹೇಳಿದ್ದು, ಈ ವಿಚಾರವನ್ನು ಅವರು ಇಂದು (ನವೆಂಬರ್ 6) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?
ನಾನು ಕರ್ನಾಟಕದ ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠದ ಮತ್ತು ಶೃಂಗೇರಿ ಮಠದ ಭಕ್ತನಾಗಿದ್ದೇನೆ. ನಿಮಗೆ ತಿಳಿದಿರುವಂತೆ ಅದು ಶ್ರೀ ಶಂಕರಾಚಾರ್ಯರು ಸ್ಥಾಪಿಸಿದ ದೇಶದ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಒಂದಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಬರೆದುಕೊಂಡಿದ್ದಾರೆ.

ಶೃಂಗೇರಿ ಮಠವು ಶತಮಾನಗಳಿಂದ, ವಿವಿಧ ರಾಜರ, ಆಡಳಿತಗಾರರ ಜೊತೆಗೆ ಧಾರ್ಮಿಕ ಕೇಂದ್ರವಾಗಿ ಒಗ್ಗೂಡಿಸಿಕೊಂಡು ನಡೆದಿರುವುದು ವಿಶೇಷ ಎಂದು ಶೃಂಗೇರಿ ಮಠದ ಬಗ್ಗೆ ಎಚ್.ಡಿ. ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ.

ಮೈಸೂರು ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್​ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

'ಈ ಧರ್ಮ ಕ್ಷೇತ್ರದ ಮಾರ್ಗದರ್ಶನವು ಇಂದಿನ ದಿನದವರೆಗೂ ಮುಂದುವರಿದಿದೆ. ಶೃಂಗೇರಿ ಮಠ, ವೈಯಕ್ತಿಕವಾಗಿ ನನಗೆ ಸಮಾಜದ ಸಾಮರಸ್ಯದ ಕೇಂದ್ರವಾಗಿ ಕಂಡಿದೆ. ಈ ಪವಿತ್ರ ಕ್ಷೇತ್ರದಿಂದ ನನ್ನ ಜೀವನದಲ್ಲಿ ಪಡೆದುಕೊಂಡ ಆಶೀರ್ವಾದಕ್ಕೆ ನಾನು ಚಿರಋಣಿಯಾಗಿ ಇರುತ್ತೇನೆ' ಎಂದು ದೇವೇಗೌಡ ತಿಳಿಸಿದ್ದಾರೆ.

I am Very Impressive To See The Kedarnaths Shankaracharya Statue; Former PM Deve Gowda Wrote To PM Modi

'ಶೀಘ್ರವೇ ಕೇದಾರನಾಥಕ್ಕೆ ಭೇಟಿ ಕೊಟ್ಟು, ಹೊಸತಾಗಿ ಉದ್ಘಾಟಿಸಿರುವ ಶಂಕರಾಚಾರ್ಯರ ಪ್ರತಿಮೆ ನೋಡಬೇಕು ಎಂದು ಕಾತುರನಾಗಿದ್ದೇನೆ. ಆ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವರು ರಚಿಸಿದ್ದಾರೆ ಎಂಬುದು ಸಂತೋಷಕ್ಕೆ ಹೆಚ್ಚಿನ ಕಾರಣವಾಗಿದೆ. ಪ್ರತಿಮೆ ರಚನೆಗೆ ಬಳಸಿದ ಕಪ್ಪು ಶಿಲೆ ಮೈಸೂರು ಜಿಲ್ಲೆ ಎಚ್​.ಡಿ. ಕೋಟೆಯದ್ದು ಎಂದು ತಿಳಿದುಕೊಂಡಿದ್ದೇನೆ. ಈ ಕಾರ್ಯದಲ್ಲಿ ಕರ್ನಾಟಕದ ಭಾಗವೂ ಬಹಳಷ್ಟಿದೆ. ಭಗವಂತನ ಆಶೀರ್ವಾದ ನಿಮ್ಮ ಮೇಲಿರಲಿ' ಎಂದು ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಗೆ ಶುಭ ಹಾರೈಸಿದ್ದಾರೆ.

   ಚೀನಾದಿಂದ ಬೇರೆ ರಾಷ್ಟ್ರಕ್ಕೂ ತೊಂದರೆ | Oneindia Kannada
   English summary
   Former PM HD Deve Gowda wrote to Prime Minister Narendra Modi on the new Shankaracharya statue in Kedarnath.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   Desktop Bottom Promotion