ನನಗೆ ಮುಖ್ಯಮಂತ್ರಿಯಾಗೋಕೆ ಇಷ್ಟವಿರಲಿಲ್ಲ: ಕುಮಾರಸ್ವಾಮಿ
Recommended Video

ಬೆಂಗಳೂರು, ಜೂನ್ 11: "ನನಗೆ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ. ಆದರೆ ಕಾಂಗ್ರೆಸ್ಸಿಗರು ಮತ್ತು ದೆಹಲಿ ನಾಯಕರ ಒತ್ತಾಯದಿಂದಾಗಿ ನಾನು ಮುಖ್ಯಮಂತ್ರಿಯಾಗಿದ್ದೇನೆ" ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸಿಎಂ ಸ್ಥಾನ ತಮಗೆ ಬಯಸಿ ಬಂದಿದ್ದಲ್ಲ' ಎಂದರು.
'ಚುನಾವಣೆಯ ನಂತರ ಯಾವ ಪಕ್ಷಕ್ಕೂ ಸಂಪೂರ್ಣ ಬಹುಮತ ಬಾರದಿದ್ದಾಗ, ಕಾಂಗರೆಸ್ ನಾಯಕರೇ ಮುಂದೆಬಂದು ಸರ್ಕಾರ ರಚನೆಗೆ ಬೇಷರತ್ ಬೆಂಬಲವನ್ನು ಜೆಡಿಎಸ್ ಗೆ ನೀಡಿದರು. ಆದರೆ ಮುಖ್ಯಮಂತ್ರಿಯಾಗಲು ನಾನು ಸಿದ್ಧನಿರಲಿಲ್ಲ. ಆದರೆ ನೀವೇ ಮುಖ್ಯಮಂತ್ರಿಯಾಗಬೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದರು' ಎಂದು ಅವರು ಹೇಳಿದರು.
"ನನ್ನ ಮಗನಿಗೆ ಆರೋಗ್ಯ ಸರಿಯಿಲ್ಲ. ಆತ ಮುಖ್ಯಮಂತ್ರಿಯಾಗುವುದು ಬೇಡ ಎಂದು ತಂದೆಯವರಾದ ದೇವೇಗೌಡರೂ ಹೇಳಿದ್ದರು. ಆದರೆ ದೆಹಲಿ ನಾಯಕರೂ ನೀವೇ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಡ ಹೇರಿದ್ದರಿಂದ ಮಣಿದು ಮುಖ್ಯಮಂತ್ರಿಯಾಗಿದ್ದೇನೆ" ಎಂದು ಅವರು ಹೇಳಿದರು.

ಈ ಮೊದಲು ಸಹ ಹಲವು ಬಾರಿ ಇದೇ ಮಾತನ್ನು ಎಚ್ ಡಿ ಕುಮಾರಸ್ವಾಮಿ ಪುನರುಚ್ಛರಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications