ನಾನು ಯಾವುದಕ್ಕೂ ಹೆದರುವುದಿಲ್ಲ: ಕುಮಾರ ಸ್ವಾಮಿ
ತಾವು ಯಾರಿಗೂ ಹೆದರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ತಿಳಿಸಿದ್ದಾರೆ. ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ.
ಬೆಂಗಳೂರು, ಜೂನ್ 16: ನನ್ನ ವಿರುದ್ಧ ಎಂಥದ್ದೇ ಆರೋಪ ಬಂದರೂ ಸರಿ ನಾನು ಹೆದರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಗುಡುಗಿದ್ದಾರೆ.
ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಾವು ಯಾವುದಕ್ಕೂ ಹೆದರುವುದಿಲ್ಲ ಎಂದರು.

ವಿಧಾನಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ''ಜಂತಕಲ್ ಹಗರಣದ ಆರೋಪ ನಮ್ಮ ಮೇಲೆ ಬಂದಿರುವ ಬಗ್ಗೆ ಇತ್ತೀಚೆಗೆ ಹಿರಿಯ ಕಾಂಗ್ರೆಸ್ಸಿಗರೊಬ್ಬರು ನಿಮ್ಮಂತಹ ಒಳ್ಳೆಯವರಿಗೆ ಇಂತಹ ಆರೋಪ ಬಂದಿದೆಯಲ್ಲ ಎಂದು ಕಣ್ಣೀರು ಹಾಕಿದರು. ಅಂತಹ ವಿಶ್ವಾಸವನ್ನು ನಾನು ಸಂಪಾದಿಸಿದ್ದೇನೆ. ಯಾವುದಕ್ಕೂ ನಾನು ಭಯ ಪಡುವುದಿಲ್ಲ'' ಎಂದು ತಿಳಿಸಿದರು.
ಸತ್ಯಾಂಶ ಒಂದಲ್ಲ ಒಂದು ದಿನ ಹೊರ ಬರುತ್ತದೆ. ನಾನು ಗಾಜಿನ ಮನೆಯಲ್ಲಿ ಕುಳಿತು ಮಾತನಾಡುತ್ತಿಲ್ಲ. ಆದರೆ, ಕೆಲವರು ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಕಡೆಗೆ ಕೈ ತೋರಿಸುತ್ತಿದ್ದಾರೆ ಎಂದು ತಿಳಿಸಿದರು.












Click it and Unblock the Notifications