'ಸಿದ್ದರಾಮಯ್ಯ ಸರಿಯಾದ ವಿಳಾಸ ನೀಡಿದರೆ ಪ್ರಗತಿ ವರದಿ ಕಳುಹಿಸುವೆ'

ಬೆಂಗಳೂರು, ಏಪ್ರಿಲ್ 02: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾದ ವಿಳಾಸ ನೀಡಿದರೆ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರಗತಿ ವರದಿಯನ್ನು ಅಂಚೆ ಮೂಲಕ ಕಳುಹಿಸಿಕೊಡುತ್ತೇನೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ಟಾಂಗ್ ನೀಡಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮಂಗಳವಾರ (ಏಪ್ರಿಲ್ 02) ಬೆಳಗ್ಗೆ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಕೆರೆಗುಡ್ಡದಹಳ್ಳಿಯ ಗಂಗಾಧರಯ್ಯ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ. ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರಲ್ಲಾ ಎಂದು ಸುದ್ದಿಗಾರರು ಪ್ರಶ್ನಿಸಿದಾಗ ಇದಕ್ಕೆ ತಿರುಗೇಟು ನೀಡಿದ ಸದಾನಂದಗೌಡರು, ಪ್ರಗತಿ ವರದಿಯನ್ನು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಳುಹಿಸಬೇಕೋ ಅಥವಾ ಬೇರೆಲ್ಲಿಗಾದರೂ ಕಳುಹಿಸಬೇಕೋ ಎಂಬುದನ್ನು ಸಿದ್ದರಾಮಯ್ಯನವರೇ ತಿಳಿಸಲಿ ಎಂದು ಸವಾಲು ಹಾಕಿದರು.

I send a progress report if Siddaramaiah given correct address:Sadananda gowda

ಸಿದ್ದರಾಮಯ್ಯನವರು ಭ್ರಮನಿರಸನಗೊಂಡು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ನರೇಂದ್ರ ಮೋದಿಯವರು ದೇಶದ 130 ಕೋಟಿ ಜನರಿಗೂ ಚೌಕಿದಾರರು. ಅದರಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಹ ಸೇರಿದ್ದಾರೆ. ಮೋದಿಯವರು ದೇಶದ ಜನತೆಗೆ ಚೌಕಿದಾರರು. ದೇಶ ರಕ್ಷಣೆಯ ಚೌಕಿದಾರರು ನರೇಂದ್ರ ಮೋದಿ ಎಂದು ಡಿವಿಎಸ್ ಪ್ರತಿಕ್ರಿಯಿಸಿದರು.

ಬೆಂಗಳೂರು ಕೇಂದ್ರಭಾಗ ಲೋಕಸಭಾ ಕ್ಷೇತ್ರದ ಸಮಗ್ರ ಚಿತ್ರಣ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸದಾನಂದಗೌಡರು, ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೆ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ 65 ಸಾವಿರ ಮತಗಳ ಲೀಡಿಂಗ್ ಸಿಕ್ಕಿತ್ತು. ಆದರೆ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರಾಜು ಪರಾಭವಗೊಂಡರು. ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರೂ ಮುನಿರಾಜು ಅವರು ಜಯಗಳಿಸಲಿಲ್ಲ. ಆದ್ದರಿಂದ ಇನ್ನು ಮುಂದೆ ದಾಸರಹಳ್ಳಿ ಬಿಜೆಪಿ ಭದ್ರಕೋಟೆ ಎಂಬುದನ್ನು ಇನ್ನು ಮುಂದಿನ ಎಲ್ಲ ಚುನಾವಣೆಗಳಲ್ಲಿ ಸಾಬೀತುಮಾಡಿ ಎಂದು ಕರೆ ನೀಡಿದರು.

I send a progress report if Siddaramaiah given correct address:Sadananda gowda

ಈ ಸಂದರ್ಭದಲ್ಲಿ ಮುಖಂಡರಾದ ಎಸ್.ಮುನಿರಾಜು, ಅ.ದೇವೇಗೌಡ, ಸುರೇಶ್, ಮಹಮದ್ ಕಬೀರ್, ಗಿರೀಶ್, ವೆಂಕಟೇಶ್, ಕೇಶವಮೂರ್ತಿ, ಭಾಗ್ಯಮ್ಮ, ಶ್ರೀನಿವಾಸ್ ಮೂರ್ತಿ, ಪ್ರತಿಭಾ ಶ್ರೀನಿವಾಸ್ ಮೂರ್ತಿ, ಸತೀಶ್, ಗಂಗರಾಜು ಮತ್ತಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+