• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆಶಿ ಬಂಧನ: ಸಿಎಂ ಯಡಿಯೂರಪ್ಪ ಹೇಳಿದ್ದು ಹೀಗೆ

|
   DK Shivakumar :ಬಿಜೆಪಿಗೆ ಶಾಕ್ ನೀಡಿ ಯಡಿಯೂರಪ್ಪ ಹೇಳಿಕೆ..? | Oneindia Kannada

   ಬೆಂಗಳೂರು, ಸೆಪ್ಟೆಂಬರ್ 03: ಡಿಕೆ.ಶಿವಕುಮಾರ್ ಅವರು ಬಂಧನವಾಗುತ್ತಿದ್ದಂತೆ ರಾಜ್ಯದ ನಾಯಕರು ವಿವಿಧ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

   ಡಿ.ಕೆ.ಶಿವಕುಮಾರ್ ಅವರ ಆಪ್ತರೂ ಆಗಿರುವ ಸಿಎಂ ಯಡಿಯೂರಪ್ಪ ಅವರು ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಡಿಕೆಶಿ ಬಿಡುಗಡೆ ಆಗಿ ಬಂದರೆ ಹೆಚ್ಚು ಸಂತೋಶ ಪಡುವುದು ನಾನೇ' ಎಂದು ಹೇಳಿದ್ದಾರೆ.

   LIVE Updates: ಡಿಕೆಶಿ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರಿಲ್ಲ

   ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಡಿ.ಕೆ.ಶಿವಕುಮಾರ್ ಬಿಡುಗಡೆ ಆಗಿ ಬಂದರೆ ಎಲ್ಲರಿಗಿಂತಲೂ ಹೆಚ್ಚು ಸಂತೋಶ ಪಡುವವನು ನಾನೇ' ಎಂದಿದ್ದಾರೆ.

   ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಸಹ ಡಿಕೆಶಿ ಬಂಧನದ ಬಗ್ಗೆ ಟ್ವೀಟ್ ಮಾಡಿದ್ದು, 'ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ. ಹಬ್ಬದ ಆಚರಣೆಗೂ ಅವಕಾಶ ನೀಡದೆ 4 ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿಕೆ.ಶಿವಕುಮಾರ್ ರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ' ಎಂದು ಹೇಳಿದ್ದಾರೆ.

   'ಕ್ರಾಸ್ ಬಾರ್ಡರ್ ಹವಾಲ': ಆಪ್ತರಿಗೇ ಅಚ್ಚರಿ ತಂದ ಡಿಕೆಶಿ ಬಂಧನಕ್ಕೆ ಬಿಜೆಪಿ ನೀಡಿದ ಟ್ವಿಸ್ಟ್ ಇದು!

   ಮಾಜಿ ಸಿಎಂ ಸಿದ್ದರಾಮಯ್ಯ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ' ಎಂದಿದ್ದಾರೆ.

   English summary
   CM Yediyurappa said, If DK Shivakumar released from ED i will be the most happiest person.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X