ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರಿನಿಂದ ಸ್ಪರ್ಧೆ, ಸೋಮವಾರ ನಾಮಪತ್ರ ಸಲ್ಲಿಕೆ: ದೇವೇಗೌಡ ಘೋಷಣೆ

By ಅನಿಲ್ ಆಚಾರ್
|
Google Oneindia Kannada News

ಬೆಂಗಳೂರು, ಮಾರ್ಚ್ 24: ನಾನು ನಾಳೆ ನಾಮಪತ್ರ ಸಲ್ಲಿಸಲಿದ್ದೇನೆ. ಅಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜಿ.ಪರಮೇಶ್ವರ (ಕರ್ನಾಟಕ ಉಪ ಮುಖ್ಯಮಂತ್ರಿ) ತುಮಕೂರಿನಲ್ಲಿ ಇದ್ದಾರೆ. ಎಲ್ಲ ಸದಸ್ಯರ ಸಭೆ ಕರೆದು, ಸಮಸ್ಯೆ ನಿವಾರಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಯಾವುದೇ ಸಮಸ್ಯೆ ಇಲ್ಲ ಎಂದು ಎಎನ್ ಐ ಸುದ್ದಿ ಸಂಸ್ಥೆಗೆ ಜೆಡಿಎಸ್ ವರಿಷ್ಠ, ಎಚ್ ಡಿ ದೇವೇಗೌಡ ಭಾನುವಾರ ಹೇಳಿದ್ದಾರೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಐದು ವರ್ಷದ ಹಿಂದಷ್ಟೇ ಪರಮೇಶ್ವರ್ ಹಾಗೂ ಕಾಂಗ್ರೆಸ್ ನಿಂದ ಕಣಕ್ಕೆ ಇಳಿಸಿದವರಲ್ಲಿ ಮುದ್ದಹನುಮೇಗೌಡರು ಸಹ ಒಬ್ಬರು. ಈ ಸಮಸ್ಯೆ ನಿವಾರಣೆ ಆಗುತ್ತದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಯಾವುದೇ ಬಿಕ್ಕಟ್ಟಿಲ್ಲ. ನಾವು (ಕಾಂಗ್ರೆಸ್-ಜೆಡಿಎಸ್) ಒಟ್ಟಾಗಿ ಹೋರಾಟ ನಡೆಸುತ್ತೇವೆ ಎಂದು ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ತುಮಕೂರು ಕ್ಷೇತ್ರದಿಂದಲೇ ದೇವೇಗೌಡರು ಸ್ಪರ್ಧೆ: ಅಧಿಕೃತ ಘೋಷಣೆತುಮಕೂರು ಕ್ಷೇತ್ರದಿಂದಲೇ ದೇವೇಗೌಡರು ಸ್ಪರ್ಧೆ: ಅಧಿಕೃತ ಘೋಷಣೆ

ಜನಪ್ರತಿನಿಧಿಗಳು, ಎಲ್ಲ ಸ್ಥಳೀಯ ನಾಯಕರು ನಾನು ಸ್ಪರ್ಧೆಗೆ ಇಳಿಯಬೇಕು ಎಂದು ಬಯಸಿದ್ದಾರೆ. ಆದ್ದರಿಂದ ಸೋಮವಾರದಂದು ಕಾಂಗ್ರೆಸ್ ನಿಂದಲೇ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ತುಮಕೂರಿನ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸುತ್ತೇನೆ ಎಂದು ಮುದ್ದಹನುಮೇಗೌಡ ಶನಿವಾರ ಹೇಳಿದ್ದಾರೆ.

I will file Tumakuru nomination tomorrow: HD Deve Gowda

ನಾಮಪತ್ರ ಸಲ್ಲಿಸಲಿರುವ ಮುದ್ದಹನುಮೇಗೌಡ, ಆತಂಕದಲ್ಲಿ ದೇವೇಗೌಡ ನಾಮಪತ್ರ ಸಲ್ಲಿಸಲಿರುವ ಮುದ್ದಹನುಮೇಗೌಡ, ಆತಂಕದಲ್ಲಿ ದೇವೇಗೌಡ

ಜೆಡಿಎಸ್ ವಕ್ತಾರ ರಮೇಶ್ ಬಾಬು ಮಾತನಾಡಿ, ದೇವೇಗೌಡರು ಜೆಡಿಎಸ್ ನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧೆ ಮಾಡುತ್ತಾರೆ ಎಂದು ಘೋಷಿಸಿದರು. ಕರ್ನಾಟದಲ್ಲಿ ಏಪ್ರಿಲ್ ಹದಿನೆಂಟು, ಇಪ್ಪತ್ಮೂರರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ ಇಪ್ಪತ್ಮೂರಕ್ಕೆ ಫಲಿತಾಂಶ ಪ್ರಕಟ ಆಗಲಿದೆ.

English summary
JDS national president HD Deve Gowda on Sunday said he will file his nomination from the Tumakuru Lok Sabha seat, where sitting Congress MP SP Muddahanumegowda is also staking claim after the constituency was conceded to JDS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X