Get Updates
Get notified of breaking news, exclusive insights, and must-see stories!

ಹೆಬ್ಬಾಳ ಕ್ಷೇತ್ರದ ಟಿಕೆಟ್ ಬೇಡವೆಂದ ಸುಬ್ರಮಣ್ಯ ನಾಯ್ಡು!

ಬೆಂಗಳೂರು, ಜನವರಿ 21 : ಅಚ್ಚರಿಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಉಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಬುಧವಾರ ಹೆಬ್ಬಾಳ ಕ್ಷೇತ್ರದ ಟಿಕೆಟ್ ತಮಗೆ ನೀಡಬೇಕು ಎಂದು ಅವರು ಬಿಜೆಪಿ ನಾಯಕರನ್ನು ಒತ್ತಾಯಿಸಿದ್ದರು.

ಫೆಬ್ರವರಿ 13ರಂದು ನಡೆಯುವ ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. [ಹೆಬ್ಬಾಳ ಕ್ಷೇತ್ರದ ಟಿಕೆಟ್ ಕೇಳಿದ ಕಟ್ಟಾ]

Katta Subramanya Naidu

ಬುಧವಾರ ಸಂಜೆ ಕಟ್ಟಾ ಸುಬ್ರಮಣ್ಯ ನಾಯ್ಡು ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ತಾವು ಉಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಹಾಲಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಅವರು ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. [ಹೆಬ್ಬಾಳದಲ್ಲಿ ಬಿಜೆಪಿ ಅಭ್ಯರ್ಥಿ ಯಾರು?]

ಬಿಜೆಪಿಯ ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುಬ್ಬು ನರಸಿಂಹ ಮತ್ತು ಇತರ ನಾಯಕರ ಬಳಿ, ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ತಮ್ಮ ಕುಟುಂಬದ ಯಾವುದೇ ಸದಸ್ಯರಿಗೂ ಟಿಕೆಟ್ ನೀಡುವುದು ಬೇಡ, ಯಾರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಹೇಳಿದ್ದಾರೆ.

ಸುಬ್ರಹ್ಮಣ್ಯ ನಾಯ್ಡು ಅವರು ಸೂಚಿಸುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ ಎಂದು ಪಕ್ಷದ ನಾಯಕರು ಸಂದೇಶ ಕಳಿಸಿದ್ದರು. ಆದರೆ, ಕಟ್ಟಾ ಅವರು ಯಾವ ಅಭ್ಯರ್ಥಿಯ ಹೆಸರನ್ನು ತಿಳಿಸಿಲ್ಲ. ಪಕ್ಷ ಟಿಕೆಟ್ ನೀಡುವ ವ್ಯಕ್ತಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು : ಬುಧವಾರ ಬೆಳಗ್ಗೆ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು 'ಕ್ಷೇತ್ರದ ಟಿಕೆಟ್ ನೀಡುವುದಾದದರೆ ನನಗೆ ಮಾತ್ರ ಕೊಡಿ. ನನ್ನ ಕುಟುಂಬದ ಯಾವುದೇ ಸದಸ್ಯರಿಗೆ ಟಿಕೆಟ್ ಕೊಟ್ಟರೆ, ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಪಕ್ಷದ ನಾಯಕರಿಗೆ ತಿಳಿಸಿದ್ದರು. ಆದರೆ, ಸಂಜೆ ವೇಳೆಗೆ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಆದ್ದರಿಂದ, 2013ರ ಚುನಾವಣೆಯಲ್ಲಿ ಕಟ್ಟಾ ಅವರ ಪರಮಾಪ್ತರಾಗಿದ್ದ ಜಗದೀಶ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು, ಅವರು ಜಯಗಳಿಸಿದ್ದರು. ಜಗದೀಶ್ ಕುಮಾರ್ ಅವರ ಅಕಾಲಿಕ ಮರಣದಿಂದಾಗಿ ಉಪ ಚುನಾವಣೆ ಎದುರಾಗಿದೆ. ಫೆ.13ರಂದು ಮತದಾನ ನಡೆಯಲಿದ್ದು, ಫೆ.16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+