ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಶವಂತಪುರದಿಂದ ಸ್ಪರ್ಧೆ, ಶೋಭಾ ಕರಂದ್ಲಾಜೆ ಹೇಳಿದ್ದೇನು?

|
Google Oneindia Kannada News

Recommended Video

ಮುಂಬರುವ ಚುನಾವಣೆಗೆ ಯಶವಂತಪುರದಿಂದ ಸ್ಪರ್ಧಿಸುವ ಬಗ್ಗೆ ಶೋಭಾ ಕರಂದ್ಲಾಜೆ ಸ್ಪಷ್ಟನೆ | Oneindia Kannada

ಬೆಂಗಳೂರು, ಏಪ್ರಿಲ್ 18 : ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ 2018ರ ಚುನಾವಣೆಗೆ ಸ್ಪರ್ಧಿಸುವ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. 'ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದಾರೆ.

'ಬಸವಣ್ಣಗೆ ಹಾರ ಹಾಕಬಾರದೆಂದು ಹೇಳಲು ಶೋಭಾ ಯಾರು?''ಬಸವಣ್ಣಗೆ ಹಾರ ಹಾಕಬಾರದೆಂದು ಹೇಳಲು ಶೋಭಾ ಯಾರು?'

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು, 'ನನ್ನ ಸಂಸದ ಸ್ಥಾನದ ಅವಧಿ ಇನ್ನೂ ಒಂದು ವರ್ಷಗಳ ಕಾಲವಿದೆ. ನಂತರ ಮುಂದಿನ ರಾಜಕೀಯ ನಿರ್ಧಾರವನ್ನು ಕೈಗೊಳ್ಳುತ್ತೇನೆ' ಎಂದರು.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

'ಯಶವಂತಪುರ ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸುವೆ ಎಂಬ ಸುದ್ದಿ ಸುಳ್ಳು. ರಾಜ್ಯ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ' ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

I will not contesting for Karnataka assembly elections 2018 says Shobha Karandlaje

ಶೋಭಾ ಕರಂದ್ಲಾಜೆ ಅವರು ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಬಿಜೆಪಿಯ 3ನೇ ಪಟ್ಟಿಯಲ್ಲಿ ಅವರ ಹೆಸರು ಘೋಷಣೆಯಾಗಲಿದೆ ಎಂಬ ಸುದ್ದಿ ಮಂಗಳವಾರ ಹಬ್ಬಿತ್ತು. ಇಂದು ಈ ಸುದ್ದಿಗಳಿಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಯಶವಂತಪುರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ?ಯಶವಂತಪುರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ?

2008ರಲ್ಲಿ ಶೋಭಾ ಕರಂದ್ಲಾಜೆ ಅವರು ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 57,643 ಮತಗಳನ್ನು ಪಡೆದು ಜಯಗಳಿಸಿದ್ದರು. 2013ರ ಚುನಾವಣೆಯಲ್ಲಿ ಅವರು ಕೆಜೆಪಿ ಅಭ್ಯರ್ಥಿಯಾಗಿ ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 20,909 ಮತಗಳನ್ನು ಪಡೆದಿದ್ದರು.

ಯಶವಂತಪುರ ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಎಸ್.ಟಿ.ಸೋಮಶೇಖರ್. ಈ ಬಾರಿಯ ಚುನಾವಣೆಗೂ ಅವರೇ ಅಭ್ಯರ್ಥಿ. ಜೆಡಿಎಸ್‌ನಿಂದ ಟಿ.ಎನ್.ಜವರಾಯಿ ಗೌಡ ಅವರು ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

English summary
Udupi-Chikmagalur constituency MP Shobha Karandlaje clarified that she is not contest for Karnataka assembly elections 2018 from Yeshwanthpur assembly constituency, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X