ನಾನು ಸಚಿವರಾಗಲ್ಲ ಎಂದ ಜಗದೀಶ್ ಶೆಟ್ಟರ್ ಬಗ್ಗೆ ಬೊಮ್ಮಾಯಿ ಮಾತು

ಬೆಂಗಳೂರು, ಜುಲೈ 28: ರಾಜ್ಯದಲ್ಲಿ ಮುಂದಿನ ಸಚಿವ ಸಂಪುಟಕ್ಕೆ ನಾನು ಸೇರ್ಪಡೆ ಆಗುವುದಿಲ್ಲ ಎಂದ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಜಗದೀಶ್ ಶೆಟ್ಟರ್ ನನ್ನ ಅತ್ಯಾಪ್ತರು. ಬೆಳಗ್ಗೆಯಷ್ಟೇ ಅವರ ಜೊತೆಗೆ ಮಾತನಾಡಿದ್ದೇನೆ. ಆದರೆ ಜಗದೀಶ್ ಶೆಟ್ಟರ್ ತೀರ್ಮಾನದ ಬಗ್ಗೆ ನನಗೆ ಮಾಹಿತಿಯಿಲ್ಲ. ಮತ್ತೊಮ್ಮೆ ಅವರೊಂದಿಗೆ ಈ ಕುರಿತು ಚರ್ಚೆ ನಡೆಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಿ ಕೆಲಸ ಮಾಡುವುದಕ್ಕೆ ಇಚ್ಛಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದ್ದರು.. ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವುದಕ್ಕಾಗಿ ರಾಜ್ಯಾದ್ಯಂತ ಸುತ್ತಿದ್ದೇವೆ. ವರಿಷ್ಠರು ಹೆಚ್ಚಿನ ಜವಾಬ್ದಾರಿಯನ್ನು ನೀಡಿದರೆ ನಿರ್ವಹಿಸುವುದಕ್ಕೆ ನಾನು ಸಿದ್ಧನಿದ್ದೇನೆ. ಆದರೆ ಸಚಿವನಾಗಲು ಬಯಸುವುದಿಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಶೆಟ್ಟರ್ ಉತ್ತರಿಸಿದ್ದರು.

I will not join Next Cabinet; Basavaraj Bommai Reaction About Jagadeesh Shettar Statement

ಬಿಜೆಪಿ ಪಕ್ಷ ಸಂಘಟನೆಗೆ ಸಿದ್ಧ ಎಂದ ಶೆಟ್ಟರ್:

"ಬಿ ಎಸ್ ಯಡಿಯೂರಪ್ಪ ತಮಗಿಂತ ಹಿರಿಯ ನಾಯಕರು ಎಂಬ ಕಾರಣಕ್ಕಾಗಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನಾನು ಸಚಿವರಾಗಿ ಸಂಪುಟದಲ್ಲಿ ಕಾರ್ಯ ನಿರ್ವಹಿಸಿದ್ದೇವೆ. ಆದರೆ ಈ ಹಂತದಲ್ಲಿ ನಾನು ಸಂಪುಟ ಸೇರಲು ಇಚ್ಛಿಸುವುದಿಲ್ಲ. ಅದರ ಬದಲಿಗೆ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಿದ್ಧನಿದ್ದೇನೆ," ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಆಡಿಯೋಗೂ ನನ್ನ ನಿರ್ಧಾರಕ್ಕೂ ಸಂಬಂಧವಿಲ್ಲ:

ಕರ್ನಾಟಕದಲ್ಲಿ ಮುಂದೆ ರಚನೆಯಾಗಲಿರುವ ಸಂಪುಟದಲ್ಲಿ ಸಚಿವನಾಗಿ ಕಾರ್ಯ ನಿರ್ವಹಿಸುವುದಿಲ್ಲ ಎಂಬುದರ ಬಗ್ಗೆ ಈಗಾಗಲೇ ಬಿ ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಗೆ ತಿಳಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋಗೂ ನನ್ನ ನಿರ್ಧಾರಕ್ಕೂ ಯಾವುದೇ ಸಂಬಂಧವಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರವಾಗಿದೆ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ 20ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ:

ಬಿ ಎಸ್ ಯಡಿಯೂರಪ್ಪ ನಂತರ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಾಯಿ ಪಟ್ಟಕ್ಕೇರಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಸವರಾಜ ಬೊಮ್ಮಾಯಿರನ್ನು ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಹ್ವಾನಿಸಿದ ಹಿನ್ನೆಲೆ ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+