• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

BREAKING: ನಾನು ಕಾಂಗ್ರೆಸ್‌ ಪಕ್ಷದಲ್ಲಿಯೇ ಮುಂದುವರೆಯುತ್ತೇನೆ!

|

ಬೆಂಗಳೂರು, ಡಿ. 03: ಡಿ.ಜೆ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಬಂಧನವಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾಜಿ ಕಾರ್ಪೊರೇಟರ್ ಜಾಕೀರ್ ಬಂಧನದಿಂದ ಮತ್ತೊಬ್ಬ ಪ್ರಮುಖ ಆರೋಪಿಯ ಬಂಧನವಾದಂತಾಗಿದೆ. ಜೊತೆಗೆ ಇದೇ ಸಂದರ್ಭದಲ್ಲಿ ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಇಡಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ತನಿಖೆ ನಡೆಸಿದ್ದಾರೆ.

   DJ Halli ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಕಾರ್ಪೋರೇಟರ್ ಜಾಕೀರ್ ಬಂಧನ | Oneindia Kannada

   ತಮ್ಮ ಮನೆಯ ಮೇಲೆ ನಡೆದಿದ್ದ ದಾಳಿಯಿಂದ ವಿಚಲಿತರಾಗಿರುವ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಮಾಜಿ ಕಾರ್ಪೊರೇಟರ್ ಜಾಕೀರ್ ಬಂಧನದ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.

   ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನವಾಗಿದೆ ಎಂಬ ಮಾಹಿತಿ ಇದೆ. ಇದರಿಂದ ನನಗೆ ನ್ಯಾಯ ಸಿಗುವ ಭರವಸೆ ಇದೆ. ಮಾಜಿ ಮೇಯರ್ ಸಂಪತ್ ರಾಜ್ ಮತ್ತು ಜಾಕೀರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಮನವಿ ಮಾಡಿದ್ದೆ. ಅವರು ಶಿಸ್ತು ಸಮಿತಿಗೆ ವಹಿಸುವ ಭರವಸೆ ನೀಡಿದ್ದರು‌. ಆದರೆ ಈವರೆಗೆ ಪ್ರಕರಣವನ್ನು ಶಿಸ್ತು ಸಮಿತಿಗೆ ವಹಿಸಿದ ಬಗ್ಗೆ ಯಾವುದೇ ಮಾಹಿತಿ ನನಗೇ ಇಲ್ಲ. ಇದು ನನ್ನ ಮನೆಗೆ ಸಂಬಂಧಿಸಿದ ವಿಷಯ. ಹಾಗಾಗಿ ನಾನು ಏಕಾಂಗಿಯಾಗಿ ಹೋರಾಡುತ್ತಿದ್ದೇನೆ. ಶಿಸ್ತು ಸಮಿತಿ ಸ್ಪಂದಿಸದೇ ಇದ್ದಲ್ಲಿ ಎಐಸಿಸಿಗೆ ಪತ್ರ ಬರೆಯುತ್ತೇನೆ. ನನಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

   ಹಾಗಂತ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಬಿಜೆಪಿ ಸೇರುವ ಪ್ರಶ್ನೆಯಿಲ್ಲ. ಅರವಿಂದ ಲಿಂಬಾವಳಿ ನನಗೆ ಸಂಬಂಧಿಕರು ಹಾಗಾಗಿ ನನಗೆ ಬೆಂಬಲ ಸೂಚಿಸಿದ್ದಾರೆ. ಬೋವಿ ಸಮಾಜದ ಶ್ರೀಗಳು ಸಹ ಬೆಂಬಲಿಸಿದ್ದಾರೆ. ಆದರೂ ನನ್ನ ತಂದೆ ಕಾಲದಿಂದ ನಾವು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇವೆ. ಮುಂದೆಯೂ ಕಾಂಗ್ರೆಸ್ ನಲ್ಲಿಯೇ ಇರುತ್ತೇವೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸ್ಪಷ್ಟವಾಗಿ ಹೇಳಿದ್ದಾರೆ. ಆ ಮೂಲಕ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

   English summary
   Pulakeshinagar Congress MLA Akhanada Shrinivasamurthy said in a statement that arrest of former corporator Zakir over the DJ village riot has given me hope for justice. I will not leave the Congress party. Know more,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X