ಒನ್ ವೇಗೆ ಕಾರು ನುಗ್ಗಿಸಿದ ವಾಯುಸೇನೆ ಅಧಿಕಾರಿ ಹೆಂಡತಿ
ಬೆಂಗಳೂರು, ಸೆ. 29 : ಮದ್ಯದ ನಶೆ ಏನೂ ಬೇಕಾದರೂ ಮಾಡಿಸಬಹುದು ಎಂಬುದಕ್ಕೆ ಬೆಂಗಳೂರಿನ ಮಹಿಳೆಯೊಬ್ಬರು ಮಾಡಿದ ಅವಘಡವೇ ಸಾಕ್ಷಿ. ಶನಿವಾರ ರಾತ್ರಿ ಫುಲ್ ಟೈಟ್ ಆಗಿದ್ದ ಮಹಿಳೆ ಒನ್ ವೇ ಯಲ್ಲಿ ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣಳಾಗಿದ್ದಾಳೆ. ಮಹಿಳೆಯನ್ನು ಪ್ರಶ್ನಿಸಿದ ಪೊಲೀಸರು ಮತ್ತು ನಾಗರಿಕರ ಮೇಲೂ ದರ್ಪ ತೋರಿಸಿದ್ದಾಳೆ.
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಮಹಿಳೆ ಯಲಹಂಕದ ವಾಯುಸೇನೆ ಅಧಿಕಾರಿಯೊಬ್ಬರ ಪತ್ನಿ ಎನ್ನಲಾಗಿದೆ. ಶನಿವಾರ ರಾತ್ರಿ ಸೇಂಟ್ಮಾರ್ಕ್ಸ್ ರಸ್ತೆಯಲ್ಲಿರುವ ಕೆಫೆಗೆ ಸೋದರ ಸಂಬಂಧಿ ಜತೆ ತೆರಳಿದ್ದವರು ಮದ್ಯಪಾನ ಮಾಡಿದ್ದಾರೆ ನಂತರ ಕಾರು ಚಲಾಯಿಸಿಕೊಂಡು ಬಂದಿದ್ದಾರೆ. (ಪೊಲೀಸರ ಮೇಲೆ ಹಲ್ಲೆ ಮಾಡಿದ ಮಹಿಳೆ ಬಂಧನ)

ಮ್ಯೂಸಿಯಂ ರಸ್ತೆಯಿಂದ ಕುಂಬ್ಳೆ ವೃತ್ತದ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ಸುಭಾಷ್ ಎದುರಿಗಿನಿಂದ ಬರುತ್ತಿದ್ದ ಕಾರು ಕಂಡು ದಿಗಿಲುಗೊಂಡಿದ್ದಾರೆ. ಅಪಘಾತ ತಪ್ಪಿಸುವ ಉದ್ದೇಶದಿಂದ ಹಠಾತ್ ಬ್ರೇಕ್ ಹಾಕಿದ್ದಾರೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ನಿಯಂತ್ರಣ ತಪ್ಪಿ ಸುಭಾಷ್ ಕಾರಿಗೆ ಡಿಕ್ಕಿಯಾಗಿವೆ.
ಸುಭಾಷ್ ಕಾರಿನ ಪಾನಮತ್ತ ಚಾಲಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ ದಂಡ ಕಟ್ಟಿ ಕೊಡುವಂತೆ ಹೇಳಿದ್ದಾರೆ. ಇದಕ್ಕೆ ಬಗ್ಗದ ಪಾನಮತ್ತ ಮಹಿಳೆ ವಾಗ್ವಾದಕ್ಕಿಳಿದಿದ್ದಾರೆ. ಕೊನೆಗೆ ಮಧ್ಯಪ್ರವೇಶಿಸಿದ ಪೊಲೀಸರ ಮೇಲೂ ಕೂಗಾಡಿದ್ದಾಳೆ. ನಂತರ ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು ಮಹಿಳೆಯ ಮೇಲೆ ಪಾನಮತ್ತ ಚಾಲನೆ ಮತ್ತು ಒನ್ ವೇ ರಸ್ತೆಯಲ್ಲಿ ವಾಹನ ಚಲಾಯಿಸಿದ ಪ್ರಕರಣ ದಾಖಲಿಸಿಕೊಂಡು ಕಾರು ಜಪ್ತಿ ಮಾಡಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications