ದಿಟ್ಟ IAS ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ವರ್ಗಾವಣೆಯ ಆಘಾತ

ಬೆಂಗಳೂರು, ಸೆಪ್ಟೆಂಬರ್ 23: ದಿಟ್ಟ ಐಎಎಸ್ ಅಧಿಕಾರಿ, ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಸ್ಥಾನದಿಂದ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದ್ದು, ಈ ಸ್ಥಾನಕ್ಕೆ ಕೆ.ಜಿ.ಶಾಂತಾರಾಮ್ ಅವರನ್ನು ನಿಯೋಜಿಸಿದೆ.

ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಕಳೆದ ಫೆಬ್ರವರಿಯಲ್ಲಿ ವರ್ಗಾವಣೆ ಮಾಡಿ, ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು.

IAS ooficer Rohini Sindhuri transfered from KBCWWB

ಕಾರ್ಮಿಕ ಕಲ್ಯಾಣ ನಿಧಿಯಲ್ಲಿರುವ ಸುಮಾರು 7000 ಕೋಟಿ ರೂಪಾಯಿಯಷ್ಟು ಹಣವನ್ನು ಡೈವರ್ಟ್ ಮಾಡಲು ರೋಹಿಣಿ ಸಿಂಧೂರಿ ಅವರು ಒಪ್ಪದ ಕಾರಣಕ್ಕೆ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂಬ ವದಂತಿ ಹಬ್ಬಿದೆ.

ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿದ 24 ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದ್ದು, ರಾಜ್ಯದಲ್ಲಿ ಮತ್ತೆ ಐಎ ಎಸ್ ಅಧಿಕಾರಿಗಳ ವರ್ಗಾವಣೆಯ ಸದ್ದು ಆರಂಭವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+