ಮುಖ್ಯ ಕಾರ್ಯದರ್ಶಿ ಹುದ್ದೆಗೆ ವಿಜಯಭಾಸ್ಕರ್ 3 ತಿಂಗಳು ಕಾಯಬೇಕು

ಬೆಂಗಳೂರು, ಮಾರ್ಚ್ 29: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಟಿ.ಎಂ ವಿಜಯಭಾಸ್ಕರ್ ಇನ್ನು ಮೂರು ತಿಂಗಳುಗಳ ಕಾಲ ಕಾಯುವುದು ಖಚಿತವಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಹಾಲಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರ ಸೇವಾವಧಿಯನ್ನು ಮೂರು ತಿಂಗಳುಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ವರ್ಷಗಳ ಕಾಲ ಹಿರಿತನದ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ಆಗಲಿರುವ ವಿಜಯಭಾಸ್ಕರ್ ಮೂರು ತಿಂಗಳು ಕಾಯುವುದು ಅನಿವಾರ್ಯವಾಗಿದೆ.

ಕರ್ನಾಟಕದ ಮೊದಲ ಪರಿಶಿಷ್ಟ ಜಾತಿಗೆ ಸೇರಿದ ಮಹಿಳಾ ಮುಖ್ಯ ಕಾರ್ಯದರ್ಶಿಯಾಗೊದ್ದ ರತ್ನಪ್ರಭಾ ಅವರ ಸೇವಾವಧಿ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ ರಾಜ್ಯ ಸರ್ಕಾರ ರತ್ನಪ್ರಭಾ ಅವರ ಸೇವಾವಧಿಯನ್ನು ಮೂರು ತಿಂಗಳುಗಳ ಕಾಲ ವಿಸ್ತರಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.

IAS Vijayabhaskar should wait 3 months for CS post

ಈ ಮನವಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಆಡಳಿತ ಮತ್ತು ಸಿಬ್ಬಂದಿ ಇಲಾಖೆ ಮೂರು ತಿಂಗಳ ವಿಸ್ತರಣೆಗೆ ಗುರುವಾರ ಹಸಿರು ನಿಶಾನೆ ತೋರಿದೆ. ಇದರಿಂದ ನೂತನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಟಿ.ಎಂ ವಿಜಯಭಾಸ್ಕರ್ ಇನ್ನು ಮೂರು ತಿಂಗಳುಗಳ ಕಾಲ ಕಾಯುವು ಅನಿವಾರ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+