ವಿಶ್ವಕಪ್ ಪಂದ್ಯಗಳ ದಿನ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ: ಪಾರ್ಕಿಂಗ್ ವಿವರ

ಐಸಿಸಿ ಏಕದಿನ ವಿಶ್ವಕಪ್ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಭಾರತ ತಂಡ ಸತತ ನಾಲ್ಕು ಪಂದ್ಯಗಳನ್ನು ಗೆದ್ದಿರುವುದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ದೇಶದ 10 ನಗರಗಳಲ್ಲಿ ವಿಶ್ವಕಪ್ ಪಂದ್ಯಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ ಕೂಡ ವಿಶ್ವಕಪ್‌ನ 5 ಪಂದ್ಯಗಳು ನಡೆಯಲಿವೆ, ಈ ಸಂದರ್ಭದಲ್ಲಿ ಹೆಚ್ಚಿನ ಜನ ಮೈದಾನಕ್ಕೆ ಬರುವ ಕಾರಣ, ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಚಾರ ನಿರ್ಬಂಧ, ಟ್ರಾಫಿಕ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇಂದು (ಶುಕ್ರವಾರ) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಆಸ್ಟ್ರೇಲಿಯಾ ನಡುವೆ ಪಂದ್ಯ ನಡೆಯಲಿದ್ದು, ಕ್ರೀಡಾಂಗಣದ ಸುತ್ತಮುತ್ತ ಟ್ರಾಫಿಕ್ ಹೆಚ್ಚಾಗುವ ಸಾಧ್ಯತೆ ಇದೆ. ಪಾಕಿಸ್ತಾನ ಆಸ್ಟ್ರೇಲಿಯಾ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

icc-world-cup

ಪಂದ್ಯ ವೀಕ್ಷಿಸಲು ಬರುವ ವೀಕ್ಷಕರಿಗೆ ತೊಂದರೆಯಾಗದಂತೆ ಟ್ರಾಫಿಕ್ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಿದ್ದು, ವೀಕ್ಷಕರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಇರುವ, ಕ್ವೀನ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಬಿ.ಆರ್. ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್‌ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪಂದ್ಯ ವೀಕ್ಷಣೆಗೆ ಬರುವ ವೀಕ್ಷಕರಿಗೆ ಪಾರ್ಕಿಂಗ್‌ಗೆ ಮೂರು ಕಡೆ ವ್ಯವಸ್ಥೆ ಮಾಡಲಾಗಿದೆ. ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಕ್ಯಾಬ್‌ ಮತ್ತು ಆಟೋದಲ್ಲಿ ಬರುವ ಪ್ರಯಾಣಿಕರಿಗೆ ಡ್ರಾಪ್ ಮತ್ತು ಪಿಕಪ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. ಶೋಭಾ ಮಾಲ್, ಸಪೀನಾ ಪ್ಲಾಜಾ, ಶಿವಾಜಿನಗರ ಬಸ್ ನಿಲ್ದಾಣ, ಯುಬಿಸಿಟಿ ಮಾಲ್ ಮತ್ತು ಕಿಂಗ್ಸ್ ರಸ್ತೆಯಲ್ಲಿ ಪೇ ಪಾರ್ಕಿಂಗ್ ವ್ಯವಸ್ಥೆ ಇರಲಿದೆ.

ಅಕ್ಟೋಬರ್ 20, 26, ನವೆಂಬರ್ 4, 9 ಮತ್ತು 12ರಂದು ಚಿನ್ನಸ್ವಾಮಿಯಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿದ್ದು, ಐದು ಪಂದ್ಯಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಂದ ಬಿಗಿ ಭದ್ರತೆ

ಕೇಂದ್ರ ವಿಭಾಗ ಡಿಸಿಪಿ ಟಿ. ಹೆಚ್ ಶೇಖರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕ್ರೀಡಾಂಗಣದಲ್ಲಿ ಭದ್ರತೆಗಾಗಿ ಒಟ್ಟು 623 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇನ್ನು ನಮ್ಮ ಮೆಟ್ರೋ ಕೂಡ ಪಂದ್ಯಗಳ ದಿನ ವಿಶೇಷ ರೈಲು ವ್ಯವಸ್ಥೆಗಳನ್ನು ಮಾಡಿದ್ದು, ಪೇಪರ್ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದೆ. ಟ್ರಾಫಿಕ್ ತೊಂದರೆಯಿಂದ ಪಾರಾಗಲು ಮತ್ತು ಸಗಮ ಸಂಚಾರಕ್ಕೆ ಮೆಟ್ರೋ ಬಳಸಲು ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+