ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಈ 4 ಲ್ಯಾಬ್‌ಗಳಲ್ಲಿ ಕೊವಿಡ್-19 ತಪಾಸಣೆ ರದ್ದು!

|
Google Oneindia Kannada News

ಬೆಂಗಳೂರು, ಏಪ್ರಿಲ್ 26: ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ ಸಂಖ್ಯೆ ಪ್ರತಿನಿತ್ಯ ಹೊಸ ದಾಖಲೆ ಬರೆಯುತ್ತಿದೆ. ಇದರ ಮಧ್ಯೆ ಕೊವಿಡ್-19 ಸೋಂಕಿನ ತಪಾಸಣೆಯಲ್ಲೂ ಅಕ್ರಮ ಎಸಗುತ್ತಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ ಕೆಲವು ವೈದ್ಯಕೀಯ ಪ್ರಯೋಗಾಲಯಗಳು ಕೊವಿಡ್-19 ತಪಾಸಣೆ ಬಗ್ಗೆ ವರದಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿಲ್ಲ. ಈ ಹಿನ್ನೆಲೆ ಕೊರೊನಾ ವರದಿ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂಬ ಬಗ್ಗೆ ಬಿಬಿಎಂಪಿಗೆ ಹಲವು ದೂರುಗಳು ಬಂದಿವೆ.

ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ: ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ಸ್ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ: ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ವೀಕರಿಸಿದ ದೂರುಗಳ ಅನ್ವಯ ಪ್ರಯೋಗಾಲಯಗಳ ಮೇಲೆ ಐಸಿಎಂಆರ್ ಕ್ರಮ ತೆಗೆದುಕೊಂಡಿದೆ. ಕೆಪಿಎಂಇ ರಿಜಿಸ್ಟ್ರೇಷನ್ ಆಫ್ ಮೆಡಲ್ ಲ್ಯಾಬೋರೇಟರಿ ಮತ್ತು ಆರತಿ ಸ್ಕ್ಯಾನ್ ಆಂಡ್ ಲ್ಯಾಬ್, ಆರ್ ವಿ ಮೆಟ್ರೋಪಾಲಿಸ್ ಲ್ಯಾಬೋರೇಟರಿ ಹಾಗೂ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜ್ ಪ್ರಯೋಗಾಲಯದಲ್ಲಿ ಕೊವಿಡ್-19 ಸೋಂಕು ತಪಾಸಣೆಯ ಅನುಮೋದನೆಯನ್ನು ರದ್ದುಗೊಳಿಸಲಾಗಿದೆ.

 ICMR Revoked The Approval For Covid Testing In 4 Labs In Bengaluru

48 ಗಂಟೆಗಳಲ್ಲಿ ಉತ್ತರ ನೀಡುವಂತೆ ನೋಟಿಸ್:

ಬೆಂಗಳೂರಿನ ನಾಲ್ಕು ಖಾಸಗಿ ಪ್ರಯೋಗಾಲಯಗಳಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆ ನಡೆಸುವುದಕ್ಕೆ ಐಸಿಎಂಆರ್ ನೀಡಿದ ಅನುಮೋದನೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೇ, ತಪಾಸಣೆ ವರದಿ ನೋಂದಣಿ ಮಾಡದಿರಲು ಕಾರಣವೇನು ಎಂಬುದರ ಬಗ್ಗೆ ಮುಂದಿನ 48 ಗಂಟೆಗಳಲ್ಲಿ ಉತ್ತರ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಕೇಸ್:

ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 34804 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 143 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 6982 ಸೋಂಕಿತರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲೇ ಒಂದು ದಿನದಲ್ಲಿ 20733 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 6,53,656ಕ್ಕೆ ಏರಿಕೆಯಾಗಿದ್ದು, ಈವರೆಗೂ 5800 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲೇ 77 ಮಂದಿ ಪ್ರಾಣ ಬಿಟ್ಟಿದ್ದು, ಬೆಂಗಳೂರಿನಲ್ಲಿ 1,80,542 ಸಕ್ರಿಯ ಪ್ರಕರಣಗಳಿವೆ.

Recommended Video

ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿ, ಈಗ ಜಿಂದಾಲ್‌ಗೆ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದ ಬಿಜೆಪಿ | Oneindia Kannada

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1339201ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 10,62,594 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 14426 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 262162 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
ICMR Revoked The Approval For Covid Testing In 4 Labs In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X