Bengaluru Second Airport: ಈ ಭಾಗದಲ್ಲಿ ಏರ್‌ಪೋರ್ಟ್ ನಿರ್ಮಿಸಿದರೆ ಈ 21 ಜಿಲ್ಲೆಗಳಿಗೆ ಅನುಕೂಲ...!
ಬೆಂಗಳೂರು, ಜನವರಿ 29: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಗೆ ಕೈ ಹಾಕಿದೆ. ಇದಾಗುತ್ತಿದ್ದಂತೆ ಎಲ್ಲಿ ನಿರ್ಮಿಸಬೇಕು ಎಂಬುದು ಫೈನಲ್ ಆಗಿಲ್ಲ. ತುಮಕೂರು ಬಳಿ ನಿರ್ಮಿಸುವಂತೆ ಒತ್ತಡ ಹೆಚ್ಚಾಗುತ್ತಿದೆ. ಒಂದು ವೇಳೆ ತುಮಕೂರು ಸಮೀಪ ಬೆಂಗಳೂರು ಎರಡನೇ ವಿಮಾನ ನಿರ್ಮಾಣವಾದರೆ ಬರೋಬ್ಬರಿ 21 ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದು ಸ್ವತಃ ಗೃಹ ಸಚಿವ ಜಿ.ಪರಮೇಶ್ವರ ಅವರೇ ಹೇಳಿದ್ದಾರೆ.
ಸದಾಶಿವನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ವಿಮಾನ ನಿಲ್ದಾಣ, ಮೈಕ್ರೋ ಫೈನಾನ್ಸ್ ಸೇರಿ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು. ಈ ವೇಳೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಪ್ರತಿಕ್ರಿಯಿಸಿ, ಹೊಸ ಏರ್‌ಪೋರ್ಟ್ ತುಮಕೂರಿಗೆ ನೀಡುವಂತೆ ಕೇಳುತ್ತಿದ್ದೇವೆ. ತುಮಕೂರಿನ ಭಾಗದಲ್ಲಿ ನಿರ್ಮಾಣವಾದರೆ ಉತ್ತರ ಕರ್ನಾಟಕ ಭಾಗದ 21 ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಈಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕು ಸಂಪರ್ಕವಾಗುತ್ತದೆ ಎಂದು ತಿಳಿಸಿದರು.

ತುಮಕೂರುವರೆಗೆ ಮೆಟ್ರೋ ಯೋಜನೆ ಸಮಗ್ರ ಯೋಜನಾ ವರದಿ (ಡಿಪಿಆರ್) ಇನ್ನು ಅಂತಿಮವಾಗಿಲ್ಲ. ಹೈದರಾಬಾದ್ ಕಂಪನಿಗೆ ನೀಡಲಾಗಿದೆ. ಡಿಪಿಆರ್ ವರದಿ ನೀಡಿಲ್ಲ. ವರದಿ ನೀಡಿದ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ. ತದನಂತರ ಕೇಂದ್ರ ಸರ್ಕಾರದ ಅನುಮತಿ ಕೇಳುತ್ತೇವೆ ಎಂದು ಅವರು ವಿವರಿಸಿದರು.
ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ. ದೂರು ಬಂದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸುಮೋಟೊ ದಾಖಲಿಸುವಂತೆಯೂ ತಿಳಿಸಲಾಗಿದೆ ಎಂದರು. ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ತಡೆಯಲು ಕಾನೂನು ರೂಪಿಸಲಾಗುತ್ತಿದೆ. ಕಾನೂನು ಸಚಿವರು ಹಾಗೂ ಕಂದಾಯ ಸಚಿವರೊಂದಿಗೆ ಸಭೆ ಕರೆಯಲಾಗಿದೆ. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂಬ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ. ಸಹಾಯವಾಣಿಯನ್ನು ಆರಂಭಿಸಲಾಗುವುದು. ಸಭೆಯಲ್ಲಿ ಅಂತಿಮವಾದರೆ ಮುಂದಿನ ಸಚಿವ ಸಂಪುಟ ಸಭೆ ಮುಂದೆ ತರುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ನೇಮಕ ಬಗ್ಗೆ ಸಚಿವರು ಹೇಳಿದ್ದೇನು?
ಮುಖ್ಯಮಂತ್ರಿ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್. ಶಾಸಕರ ಅಭಿಪ್ರಾಯ ಕೇಳಬೇಕಿಲ್ಲ ಎಂದು ರಾಮನಗರ ಶಾಸಕರ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಶಾಸಕರಿಗೆ ಅನ್ವಯವಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ, ಹೈಕಮಾಂಡ್ ಸೂಚನೆ ಶಾಸಕರಿಗು ಮತ್ತು ಮಂತ್ರಿಗಳಿಗು ಎಲ್ಲರಿಗೂ ಅನ್ವಯಯಾವಗುತ್ತದೆ. ಪಕ್ಷದಲ್ಲಿ ಯಾರು ಆ ರೀತಿ ಹೇಳಿಕೆ ಕೊಡಬಾರದು ಎಂದು ಹೈಕಮಾಂಡ್ ಸೂಚಿಸಿದ ಮೇಲೆ ಎಲ್ಲರಿಗೂ ಅನ್ವಯವಾಗುತ್ತದೆ.
ಹೈಕಮಾಂಡ್ ಮತ್ತು ಶಾಸಕರು ಆಯ್ಕೆ ಮಾಡುತ್ತಾರೆ. ಮೊದಲು ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ಆನಂತರ ಅವರು ತೀರ್ಮಾನ ಮಾಡುತ್ತಾರೆ. ಬೆಂಬಲ ಸೇರಿದಂತೆ ಬೇರೆಬೇರೆ ವಿಚಾರಗಳನ್ನು ಆಧರಿಸಿ ಪ್ರಕಟಿಸುತ್ತಾರೆ ಎಂದು ತಿಳಿಸಿದರು.












Click it and Unblock the Notifications