ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟರೆ ಅಭ್ಯಂತರವಿಲ್ಲ ಎಂದ ಎಚ್‌ಡಿಕೆ
ಬೆಂಗಳೂರು, ಜ. 25: ಸೊರಬ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಹಾಗೂ ಪರಿಷತ್ ಮಾಜಿ ಸದಸ್ಯ, ವಕ್ತಾರ ರಮೇಶ್ ಬಾಬು ಅವರು ಜೆಡಿಎಸ್ ಬಿಟ್ಟು 'ಕೈ' ಹಿಡಿಯುತ್ತಾರೆ ಎಂಬುದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಬರುವವರು ಬರುತ್ತಾರೆ, ಹೋಗುವವರು ಹೋಗುತ್ತಾರೆ.
ಬಂದು ಹೋಗುವವರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಈಗಾಗಲೇ ಹಲವಾರು ಬಾರಿ ಇಬ್ಬರನ್ನೂ ಕರೆದು ಮಾತನಾಡಿದ್ದೇನೆ. ಇನ್ನೂ ನಾನು ಎಷ್ಟು ಬಾರಿ ಕರೆದು ಮಾತನಾಡಲಿ? ದೊಡ್ಡ ಪಕ್ಷಕ್ಕೆ ಸೇರಿ ಏನೋ ಸಾಧನೆ ಮಾಡುತ್ತೇನೆಂಬ ಭ್ರಮೆ ಅವರಲ್ಲಿದೆ. ನಮ್ಮ ಪಕ್ಷ ಅವರನ್ನು ಚೆನ್ನಾಗಿ ನೋಡಿಕೊಂಡಿತ್ತು. ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಸೋತ ಬಳಿಕ ಮಧು ಬಂಗಾರಪ್ಪ ಸಧ್ಯ ಜೆಡಿಎಸ್ ಪಕ್ಷದಿಂದ ದೂರವೇ ಉಳಿದಿದ್ದಾರೆ. ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಮಾತುಕತೆ ನಡೆಸಿದ್ದು, ಯುಗಾದಿ ಬಳಿಕ ಕಾಂಗ್ರೆಸ್ ಪಕ್ಷ ಸೇರುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ ಎನ್ನಲಾಗಿದೆ.

ಮಂಗಳೂರು ಬಾಂಬ್ ಪ್ರಕರಣ ಮತ್ತು ಕುಮಾರಸ್ವಾಮಿಯ 'ಮಿಣಿಮಿಣಿ' ಪದ ಟ್ರೋಲ್ ಆದ ಕಥೆ
ಇನ್ನು ಬರುವ ಜೂನ್ ತಿಂಗಳಲ್ಲಿ ನಡೆಯುವ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಮೇಶ್ ಬಾಬು ಟಿಕೆಟ್ ಸಿಗದಿದ್ದರೆ ಪಕ್ಷ ಬಿಡುವ ಎಚ್ಚರಿಕೆಯನ್ನು ಪಕ್ಷದ ವೇದಿಕೆಯಲ್ಲಿಯೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರ ನಡೆಯ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ.
-
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications