ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟರೆ ಅಭ್ಯಂತರವಿಲ್ಲ ಎಂದ ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಜ. 25: ಸೊರಬ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಹಾಗೂ ಪರಿಷತ್ ಮಾಜಿ ಸದಸ್ಯ, ವಕ್ತಾರ ರಮೇಶ್ ಬಾಬು ಅವರು ಜೆಡಿಎಸ್ ಬಿಟ್ಟು 'ಕೈ' ಹಿಡಿಯುತ್ತಾರೆ ಎಂಬುದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಬರುವವರು ಬರುತ್ತಾರೆ, ಹೋಗುವವರು ಹೋಗುತ್ತಾರೆ.

ಬಂದು ಹೋಗುವವರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಈಗಾಗಲೇ ಹಲವಾರು ಬಾರಿ ಇಬ್ಬರನ್ನೂ ಕರೆದು ಮಾತನಾಡಿದ್ದೇನೆ. ಇನ್ನೂ ನಾನು ಎಷ್ಟು ಬಾರಿ ಕರೆದು ಮಾತನಾಡಲಿ? ದೊಡ್ಡ ಪಕ್ಷಕ್ಕೆ ಸೇರಿ ಏನೋ ಸಾಧನೆ ಮಾಡುತ್ತೇನೆಂಬ ಭ್ರಮೆ ಅವರಲ್ಲಿದೆ. ನಮ್ಮ‌ ಪಕ್ಷ ಅವರನ್ನು ಚೆನ್ನಾಗಿ ನೋಡಿಕೊಂಡಿತ್ತು. ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಮಾಧ್ಯಮ ಗ್ರೂಪ್‌ನಲ್ಲೇ ಪಕ್ಷದ ನಾಯಕರಿಗೆ ವಕ್ತಾರ ಧಮ್ಕಿಜೆಡಿಎಸ್ ಮಾಧ್ಯಮ ಗ್ರೂಪ್‌ನಲ್ಲೇ ಪಕ್ಷದ ನಾಯಕರಿಗೆ ವಕ್ತಾರ ಧಮ್ಕಿ

ಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಸೋತ ಬಳಿಕ ಮಧು ಬಂಗಾರಪ್ಪ ಸಧ್ಯ ಜೆಡಿಎಸ್‌ ಪಕ್ಷದಿಂದ ದೂರವೇ ಉಳಿದಿದ್ದಾರೆ. ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಭೇಟಿಯಾಗಿ ಕಾಂಗ್ರೆಸ್‌ ಪಕ್ಷಕ್ಕೆ ಕರೆತರಲು ಮಾತುಕತೆ ನಡೆಸಿದ್ದು, ಯುಗಾದಿ ಬಳಿಕ ಕಾಂಗ್ರೆಸ್‌ ಪಕ್ಷ ಸೇರುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ ಎನ್ನಲಾಗಿದೆ.

If he wants to join congress, let him join: HDK

ಮಂಗಳೂರು ಬಾಂಬ್ ಪ್ರಕರಣ ಮತ್ತು ಕುಮಾರಸ್ವಾಮಿಯ 'ಮಿಣಿಮಿಣಿ' ಪದ ಟ್ರೋಲ್ ಆದ ಕಥೆ

ಇನ್ನು ಬರುವ ಜೂನ್ ತಿಂಗಳಲ್ಲಿ ನಡೆಯುವ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಮೇಶ್ ಬಾಬು ಟಿಕೆಟ್ ಸಿಗದಿದ್ದರೆ ಪಕ್ಷ ಬಿಡುವ ಎಚ್ಚರಿಕೆಯನ್ನು ಪಕ್ಷದ ವೇದಿಕೆಯಲ್ಲಿಯೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರ ನಡೆಯ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ.

English summary
If he wants to join congress, let him join. Former cm hd kumaraswamy said in his residence at JP Nangara bengaluru on Madhu bangarappa's decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X