• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ರಾಹುಲ್ ಗಾಂಧಿ ರಾಜೀನಾಮೆ ನೀಡುವುದಾದರೆ ನೀಡಲಿ' ಆದರೆ...

|

ಬೆಂಗಳೂರು, ಜೂನ್ 8: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಆದರೆ ಅದಕ್ಕೂ ಮೊದಲು ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ನಾನು ಪ್ರತಿದಿನ ಬಿಜೆಪಿ ವಿರುದ್ಧ ಹೋರಾಡುತ್ತೇನೆ : ರಾಹುಲ್ ಗಾಂಧಿ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ, ಅವರಿಗೆ ಅವರೇ ಸಾಟಿ, ಅವರಿಗೆ ಉತ್ತಮ ನಾಯಕತ್ವ ಗುಣ ಇದೆ. ಒಂದೊಮ್ಮೆ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ ಆ ಜಾಗಕ್ಕೆ ಸೂಕ್ತ ವ್ಯಕ್ತಿಯನ್ನು ಮೊದಲು ನೇಮಿಸಬೇಕು ಎಂದು ಒತ್ತಾಯಿಸಿದರು.

ರಾಹುಲ್ ಗಾಂಧಿ ಇನ್ನೂ ಕಾಂಗ್ರೆಸ್‌ದ ಅಧ್ಯಕ್ಷರೇ ಆಗಿದ್ದಾರೆ, ಆದರೆ ಕೆಲವರು ಅವರು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದರೆ ಇನ್ನು ಕೆಲವರಿಗೆ ಖುಚಿ ಆದಂತಿದೆ. ಆದರೆ ಏನೇ ನಿರ್ಧಾರ ತೆಗೆದುಕೊಂಡರೂ ಅವರು ಚೆನ್ನಾಗಿ ಆಲೋಚಿಸಿರುತ್ತಾರೆ, ಅವರ ಸ್ಥಾನವನ್ನು ತುಂಬಲೂ ಯಾರಿಂದಲೂ ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ ಎಂದು ಹೇಳಿದರು.

English summary
Congress leader M Veerappa Moily says that If Rahul Gandhi wants to resign to the congress president post, he has to hand it over to the right person.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X