ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿನಾಕಾರಣ ಕೋರ್ಟ್ ಹಾಲ್ ಪ್ರವೇಶಿಸಿದರೆ ಜೈಲು ಖಚಿತ: ಹೈಕೋರ್ಟ್ ಎಚ್ಚರಿಕೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಜನವರಿ 21: ಯಾವುದೇ ಸಂಬಂಧವಿಲ್ಲದ ವ್ಯಕ್ತಿಗಳು ವಿನಾಕಾರಣ ಹೈಕೋರ್ಟ್‌ ಕೋರ್ಟ್‌ ಹಾಲ್‌ ಪ್ರವೇಶಿಸಿದರೆ ಜೋಕೆ. ಏಕೆಂದರೆ ಹಾಗೆ ಪ್ರವೇಶಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ.

ಹೀಗೊಂದು ಮೌಖಿಕ ಎಚ್ಚರಿಕೆ ನೀಡಿರುವ ಕೋರ್ಟ್‌ ವ್ಯಕ್ತಿಗಳು, ವಿಚಾರಣೆಗೆ ಸಂಬಂಧವಿಲ್ಲದೆ ಅನಗತ್ಯವಾಗಿ ಕೋರ್ಟ್ ಹಾಲ್‌ಗಳಲ್ಲಿ ಕಾಣಿಸಿಕೊಂಡರೆ ಅಂತಹವರನ್ನು ಬಂಧಿಸಿ ನೇರವಾಗಿ ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದೆ.

ಸಚಿವ ಮುನಿರತ್ನ ವಿರುದ್ಧ ವಿಧಾನಪರಿಷತ್‌ ಸದಸ್ಯ ತುಳಸಿ ಮುನಿರಾಜು ಗೌಡ ದಾಖಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯ ವಿಚಾರಣೆ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ಏಕಸದಸ್ಯ ಈ ಎಚ್ಚರಿಕೆ ನೀಡಿದೆ.

IF Unknown Person Enter Into Court Hall, We Will Send Them Directly To Jail: HC Warns

ನ್ಯಾಯಪೀಠದಲ್ಲಿ ಶುಕ್ರವಾರ ಮಧ್ಯಾಹ್ನದ ಕಲಾಪದಲ್ಲಿ ಈ ಮೌಖಿಕ ಹೇಳಿಕೆ ನೀಡಿದ ನ್ಯಾಯಮೂರ್ತಿ, 'ವಕೀಲರು, ಕಾನೂನು ವಿದ್ಯಾರ್ಥಿಗಳು, ಕೇಸಿಗೆ ಸಂಬಂಧಿಸಿದ ಕಕ್ಷಿದಾರರು, ಅಧಿಕಾರಿಗಳು ಹಾಗೂ ಸಕಾರಣ ಹೊಂದಿದ ವ್ಯಕ್ತಿಗಳಿಗೆ ಮಾತ್ರವೇ ಕೋರ್ಟ್‌ ಹಾಲ್‌ ಪ್ರವೇಶ ಇರುತ್ತದೆ' ಎಂದರು.

ಕೆಲವು ವ್ಯಕ್ತಿಗಳು ಕೇಸಿಗೆ ಸಂಬಂಧವಿಲ್ಲದಿದ್ದರೂ ಕೋರ್ಟ್ ಹಾಲ್‌ನಲ್ಲಿ ಇದ್ದುದನ್ನು ಗಮನಿಸಿದ ನ್ಯಾಯಪೀಠ, ಕಲಾಪ ಪೂರ್ಣಗೊಳ್ಳುತ್ತಿದ್ದಂತೆಯೇ ಕಳವಳ ವ್ಯಕ್ತಪಡಿಸಿತು. 'ಹೈಕೋರ್ಟ್‌ ಎಂದರೆ ಸಾಮಾನ್ಯವಲ್ಲ. ಈ ಕೋರ್ಟ್‌ ಹಾಲ್‌ನಲ್ಲಿ ಸಂಬಂಧವಿಲ್ಲದ ಅನೇಕ ಮುಖಗಳು ಕಾಣುತ್ತಿವೆ. ಇದು ವೈ ಕೆಟಗರಿಯ ಭದ್ರತೆ ಹೊಂದಿರುವ ಕೋರ್ಟ್ ಹಾಲ್‌. ಕಲಾಪದಲ್ಲಿ ಸಂಬಂಧವಿಲ್ಲದ ವ್ಯಕ್ತಿಗಳು ಏಕೆ ಹಾಜರಿದ್ದಾರೆ' ಎಂದು ಪ್ರಶ್ನಿಸಿತು. ಅಲ್ಲದೆ ಸಂಬಂಧವಿಲ್ಲದ ವ್ಯಕ್ತಿಗಳ ಮಾಹಿತಿ ಸಂಗ್ರಹಿಸುವಂತೆ ಕೋರ್ಟ್‌ ಅಧಿಕಾರಿಗೆ ಸೂಚಿಸಿತು.

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಜನಸಾಮಾನ್ಯರು ಹೈಕೋರ್ಟ್‌ ಪ್ರವೇಶಿಸುವುದಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಸದ್ಯ ಕೊಂಚ ಪ್ರಮಾಣದಲ್ಲಿ ಮಾತ್ರವೇ ಸಡಿಲಿಕೆ ಮಾಡಲಾಗಿದೆ. ಆದರೂ, ಎಲ್ಲ ಪ್ರವೇಶ ದ್ವಾರಗಳಲ್ಲಿ ರಾಜ್ಯ ಪೊಲೀಸ್‌, ಕೈಗಾರಿಕಾ ಭದ್ರತಾ ಪಡೆ ಹಾಗೂ ಎ.ಕೆ-47 ರೈಫಲ್‌ಗಳನ್ನು ಹೊಂದಿದ ಕಮಾಂಡೊಗಳ ಸಹಿತದ ಬಿಗಿ ಭದ್ರತೆಯನ್ನು ಮುಂದುವರಿಸಲಾಗಿದೆ.

ಹಿಜಾಬ್‌ ಪ್ರಕರಣದ ತೀರ್ಪು ನೀಡಿದ ತ್ರಿಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್‌ ಹಾಗೂ ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರುಗಳಿಗೆ 'ವೈ' ಕೆಟಗರಿಯ ಭದ್ರತೆ ಒದಗಿಸಲಾಗಿದೆ.

English summary
Bengaluru: High Court warns IF Unknown person enter into court hall, we will send them directly to jail. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X