ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ಲಾಸ್ಟಿಕ್ ಬಳಸ್ತಿದ್ದೀರಾ ಜುಲೈ 15ರಿಂದ ದಂಡ ಕಟ್ಟಲು ಸಿದ್ಧರಾಗಿ

|
Google Oneindia Kannada News

ಬೆಂಗಳೂರು, ಜುಲೈ 12: ನಗರದಲ್ಲಿ ಬಿಬಿಎಂಪಿ ಆದೇಶದ ಬಳಿಕವೂ ನೀವು ಪ್ಲಾಸ್ಟಿಕ್ ಬಳಕೆ ಮಾಡುವುದೇ ನಿಜವಾದರೆ ಜುಲೈ 15ರಿಂದ ದಂಡ ಕಟ್ಟಲು ಸಿದ್ಧರಾಗಿ.

ಹೌದು ಪ್ಲಾಸ್ಟಿಕ್ ಬಳಕೆ ಮಾಡಿದರೆ ಜುಲೈ 15ರಿಂದ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ನಗರದ ರೈಲ್ವೆ, ಬಸ್ ನಿಲ್ದಾಣ, ಮಾರುಕಟ್ಟೆ, ಉದ್ಯಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.

ಇನ್ಮುಂದೆ ಕೈನಲ್ಲಿ ಪ್ಲಾಸ್ಟಿಕ್ ಹಿಡಿದಿದ್ದರೂ ಬೀಳುತ್ತೆ ದಂಡಇನ್ಮುಂದೆ ಕೈನಲ್ಲಿ ಪ್ಲಾಸ್ಟಿಕ್ ಹಿಡಿದಿದ್ದರೂ ಬೀಳುತ್ತೆ ದಂಡ

ಜು.15ರ ಸೋಮವಾರದಿಂದ ವಾರ್ಡ್ ಸದಸ್ಯರು, ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಬೇಕು. ವಾರ್ಡ್ ವ್ಯಾಪ್ತಿಯ ಮಾರುಕಟ್ಟೆ, ಮಾಲ್, ಮಳಿಗೆಗಳ ಮೇಲೆ ದಾಳಿ ದಂಡ ವಿಧಿಸುವುದರ ಜೊತೆಗೆ ಪ್ಲಾಸ್ಟಿಕ್ ಚೀಲ ಬಳಕೆ ಮಾಡಿದರೆ ದುಪ್ಪಟ್ಟು ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

If you are using plastic get ready for penalty

ಬಂಡೀಪುರದಲ್ಲಿ ಪ್ಲಾಸ್ಟಿಕ್ ಹಾವಳಿ ತಪ್ಪಿಸಲು ಹೊಸ ಯೋಜನೆ ಬಂಡೀಪುರದಲ್ಲಿ ಪ್ಲಾಸ್ಟಿಕ್ ಹಾವಳಿ ತಪ್ಪಿಸಲು ಹೊಸ ಯೋಜನೆ

ವ್ಯಾಪಾರಿಗಳಿಗೆ ಬಿಬಿಎಂಪಿಯಿಂದಲೇ ಪೇಪರ್ ಬ್ಯಾಗ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿಧಾನ ಸಭಾ ಕ್ಷೇತ್ರವಾರು ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಜಾಗೃತಿ ಮೂಡಿಸಲು ಧ್ವನಿ ವರ್ಧಕಗಳನ್ನು ಬಳಸಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

English summary
If you are using plastic in Bengaluru get ready for a penalty from July 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X