ವಿಜ್ಞಾನ ಪ್ರಶಸ್ತಿ ಸಮಾರಂಭ: ಸಿಎನ್‌ಆರ್ ರಾವ್-ಎಚ್‌ಡಿಕೆ ಭೇಟಿ
ಬೆಂಗಳೂರು, ಆಗಸ್ಟ್ 6: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಸೋಮವಾರ ನಡೆದ ವಿಜ್ಞಾನಿಗಳು ಹಾಗೂ ಎಂಜಿನಿಯರ್‌ಗಳ ರಾಜ್ಯ ಪ್ರಶಸ್ತಿ 2017ರ ಪ್ರದಾನ ಸಮಾರಂಭದಲ್ಲಿ ಪ್ರೊ. ಸಿಎನ್‌ಆರ್ ರಾವ್ ಮತ್ತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದರು.
ಭೇಟಿ ವೇಳೆ ಇಬ್ಬರೂ ಕೆಲ ಕಾಲ ಮಾತುಕತೆ ನಡೆಸಿದರು. ಮಾಹಿತಿ ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು ಜಂಟಿಯಾಗಿ ಜೆಎನ್ ಟಾಟಾ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಿದ್ದವು.

ಸಿಎನ್‌ಆರ್ ರಾವ್ ಅವರು ಮುಖ್ಯ ಅತಿಥಿಯಾಗಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ. ಅನುರಾಗ್ ಕುಮಾರ್ ಗೌರವಾನ್ವಿತ ಅತಿಥಿಯಾಗಿ ಹಾಜರಿದ್ದರು.
ಈ ಸಂದರ್ಭದಲ್ಲಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ ರಾಜ್ಯದ ವಿವಿಧ ಸಾಧಕರಿಗೆ 2017ರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎನ್ಆರ್ ರಾವ್, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ನಂಬರ್ ಒನ್ ಆಗಲು ಅಂತ್ಯವಿಲ್ಲದ ಮತ್ತು ಗಣನೀಯ ಪ್ರಗತಿ ಸಾಧಿಸಬೇಕಿದೆ ಎಂದು ಹೇಳಿದರು.












Click it and Unblock the Notifications