ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜ್ಞಾನ ಪ್ರಶಸ್ತಿ ಸಮಾರಂಭ: ಸಿಎನ್‌ಆರ್ ರಾವ್-ಎಚ್‌ಡಿಕೆ ಭೇಟಿ

|
Google Oneindia Kannada News

ಬೆಂಗಳೂರು, ಆಗಸ್ಟ್ 6: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಸೋಮವಾರ ನಡೆದ ವಿಜ್ಞಾನಿಗಳು ಹಾಗೂ ಎಂಜಿನಿಯರ್‌ಗಳ ರಾಜ್ಯ ಪ್ರಶಸ್ತಿ 2017ರ ಪ್ರದಾನ ಸಮಾರಂಭದಲ್ಲಿ ಪ್ರೊ. ಸಿಎನ್‌ಆರ್ ರಾವ್ ಮತ್ತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದರು.

ಭೇಟಿ ವೇಳೆ ಇಬ್ಬರೂ ಕೆಲ ಕಾಲ ಮಾತುಕತೆ ನಡೆಸಿದರು. ಮಾಹಿತಿ ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರೊ. ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಪ್ರತಿಷ್ಠಿತ ಪ್ರಶಸ್ತಿಪ್ರೊ. ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಪ್ರತಿಷ್ಠಿತ ಪ್ರಶಸ್ತಿ

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು ಜಂಟಿಯಾಗಿ ಜೆಎನ್ ಟಾಟಾ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಿದ್ದವು.

iisc awards presentation ceremony cnr rao hdk meet

ಸಿಎನ್‌ಆರ್ ರಾವ್ ಅವರು ಮುಖ್ಯ ಅತಿಥಿಯಾಗಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ. ಅನುರಾಗ್ ಕುಮಾರ್ ಗೌರವಾನ್ವಿತ ಅತಿಥಿಯಾಗಿ ಹಾಜರಿದ್ದರು.

ಅದೆಷ್ಟೇ ಹಣ ಕೊಟ್ಟರೂ ಭಾರತ ಬಿಟ್ಟು ಹೋಗಲ್ಲ: ಪ್ರೊ ಸಿಎನ್ ಆರ್ ರಾವ್ಅದೆಷ್ಟೇ ಹಣ ಕೊಟ್ಟರೂ ಭಾರತ ಬಿಟ್ಟು ಹೋಗಲ್ಲ: ಪ್ರೊ ಸಿಎನ್ ಆರ್ ರಾವ್

ಈ ಸಂದರ್ಭದಲ್ಲಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ ರಾಜ್ಯದ ವಿವಿಧ ಸಾಧಕರಿಗೆ 2017ರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎನ್ಆರ್ ರಾವ್, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ನಂಬರ್ ಒನ್ ಆಗಲು ಅಂತ್ಯವಿಲ್ಲದ ಮತ್ತು ಗಣನೀಯ ಪ್ರಗತಿ ಸಾಧಿಸಬೇಕಿದೆ ಎಂದು ಹೇಳಿದರು.

English summary
Bharat Ratna CNR Rao and Chief Minister HD Kumaraswamy met and discussed on Monday on the occasion of KSC ST's annual State Awards for scientists and Engineers 2017 presentation ceremony.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X