IISC: ಬೆಂಗಳೂರಲ್ಲೇ ಕನ್ನಡ ರಾಜ್ಯೋತ್ಸವಕ್ಕೆ ಹಿಂದಿ ವಿದ್ಯಾರ್ಥಿಗಳಿಂದ ವಿರೋಧ: ಪೊಲೀಸ್ ಎಂಟ್ರಿ!
IISc kannadarajyotsava: ನವೆಂಬರ್ ತಿಂಗಳಲ್ಲಿ ರಾಜ್ಯದ ವಿವಿಧ ಭಾಗದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ನಡೆಯುತ್ತಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ನಡೆಯುತ್ತಿದೆ. ಆದರೆ, ಕೆಲವು ಪುಂಡರು ಕನ್ನಡ ನೆಲದಲ್ಲೇ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಮೆರವಣಿಗೆ ನಡೆಸುವುದಕ್ಕೆ ಅಡ್ಡಿಪಡಿಸಿದ್ದು, ಪುಂಡಾಟ ಮೆರೆದಿದ್ದಾರೆ. ಬೆಂಗಳೂರಿನ ಐಐಎಸ್‌ಸಿ (IISC) ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಐಐಎಸ್‌ಸಿ ಕ್ಯಾಂಪ್‌ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವುದಕ್ಕೆ ಹಿಂದಿ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.!
ನಮ್ಮದೇ ನೆಲದಲ್ಲಿ ನಮ್ಮದೇ ಭಾಷೆಯ ಅಭಿಮಾನಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆಯೇ ಸದಾಶಿವನಗರ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಕನ್ನಡ ರಾಜ್ಯೋತ್ಸವವನ್ನು ಐಐಎಸ್‌ಸಿನಲ್ಲಿ ಹಲವು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಇದೇ ಮೊದಲ ಬಾರಿ ಈ ರೀತಿ ಹಿಂದಿ ವಿದ್ಯಾರ್ಥಿಗಳು ತಗಾದೆ ತೆಗೆದಿದ್ದಾರೆ.
ಘಟನೆಯ ಹಿನ್ನೆಲೆ ಏನು
ಬೆಂಗಳೂರಿನ ಐಐಎಸ್‌ಸಿ ( Indian Institute of Science ಭಾರತೀಯ ವಿಜ್ಞಾನ ಸಂಸ್ಥೆ - IISc)ಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಈ ಸಂದರ್ಭದಲ್ಲಿ ಕೆಲವು ಹಿಂದಿ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಸಂದರ್ಭದಲ್ಲಿ ಕನ್ನಡ ವಿದ್ಯಾರ್ಥಿಗಳು ಹಾಗೂ ಹಿಂದಿ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಬಿಗಡಾಯಿಸಿದೆ ಎನ್ನಲಾಗಿದೆ.
ಇನ್ನು ಕನ್ನಡದ ನೆಲದಲ್ಲೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವುದಕ್ಕೆ ವಿರೋಧಿಸುತ್ತಿರುವುದಕ್ಕೆ ಕನ್ನಡಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಡೆಸುವುದಕ್ಕೆ ಕೆಲವು ಹಿಂದಿ ಯುವಕರು ಅಡ್ಡಪಡಿಸಿದ್ದಾರೆ.
ಬೆಂಗಳೂರಿನ ಐಐಎಸ್‌ಸಿ ಕ್ಯಾಂಪಸ್‌ನಲ್ಲಿ ಗುರುವಾರ ಕನ್ನಡ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವ ಹಾಗೂ ಮೆರವಣಿಗೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕನ್ನಡ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದ್ದರು. ಆದರೆ, ಮೆರವಣಿಗೆ ಪ್ರಾರಂಭವಾಗುತ್ತಿದ್ದಂತೆಯೇ ಕೆಲವು ಹಿಂದಿ ವಿದ್ಯಾರ್ಥಿಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ.
ರೂಪೇಶ್ ರಾಜಣ್ಣ ಆಕ್ರೋಶ
ಈ ಘಟನೆಯ ಬಗ್ಗೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಸಹ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು ಆಕ್ರೋಶ ಹೊರ ಹಾಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕನ್ನಡ ಕಲಿಯಲ್ಲ ಅನ್ನೋ ಧೋರಣೆ.. ಕನ್ನಡ ಮತ್ತು ಕನ್ನಡಿಗರ ಬಗ್ಗೆ ಕೀಳಾಗಿ ಟ್ರೋಲ್ ಮಾಡುವುದು. ಈಗ ನಮ್ಮದೇ ನೆಲದಲ್ಲಿ ನಮ್ಮ ನಾಡ ಹಬ್ಬ ಆಚರಣೆ ಮಾಡುವುದಕ್ಕೆ ಅಡ್ಡಿಪಡಿಸುತ್ತಿದ್ದಾರೆ.
ಇವರ ದುರಹಂಕಾರ ಅತಿಯಾಯಿತು ಬೆಂಗಳೂರು ಪೊಲೀಸರು ಕೂಡಲೇ ಇವರನ್ನು ಗುರುತಿಸಿ ಇವರ ಮೇಲೆ ಕ್ರಮ ಆಗಲೇಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನಮ್ಮ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಮಾಡಿ ಮೆರವಣಿಗೆ ಮಾಡಿದ್ರೆ ಹಿಂದಿವಾಲಗಳಿಂದ ಗಲಾಟೆ.@siddaramaiah @DKShivakumar @BlrCityPolice ಈ ನಾಡದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಿ pic.twitter.com/HvcSh3OsuS
— ಕನ್ನಡಿಗ ದೇವರಾಜ್ (@sgowda79) November 28, 2024
ಸದಾಶಿವನಗರ ಪೊಲೀಸರ ಮಧ್ಯಪ್ರವೇಶ: ಇನ್ನು ಬೆಂಗಳೂರಿನ ಐಐಎಸ್‌ಸಿನಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವಿಚಾರವಾಗಿ ಗದ್ದಲ ಪ್ರಾರಂಭವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸರು ಮಧ್ಯಪ್ರವೇಶಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಮೇಲೆ ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಅವಕಾಶ ನೀಡಿದ್ದು, ಪೊಲೀಸರು ಭೇಟಿ ನೀಡಿದ ಮೇಲೆ ಪರಿಸ್ಥಿತಿ ತಿಳಿಯಾಗಿದೆ.
ದೂರು ದಾಖಲಾಗಿಲ್ಲ: ಇನ್ನು ಕನ್ನಡ ರಾಜ್ಯೋತ್ಸವ ಆಚರಣೆಗೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಹಿಂದಿ ವಿದ್ಯಾರ್ಥಿಗಳ ಮೇಲೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಲಾಗಿದೆ. ಸದಾಶಿವನಗರ ಪೊಲೀಸರು ವಿಯಾರ್ಥಿಗಳಿಗೆ ಬುದ್ಧಿ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.
ನಾಡದ್ರೋಹಿಗಳನ್ನು ಬಂಧಿಸಿ: ನಮ್ಮ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಮಾಡಿ ಮೆರವಣಿಗೆ ಮಾಡಿದ್ರೆ ಹಿಂದಿವಾಲಗಳಿಂದ ಗಲಾಟೆ ಮಾಡ್ತಿದ್ದಾರೆ. ಇವರನ್ನು ಬಂಧಿಸಿ ಗಡಿಪಾರು ಮಾಡಿ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ವರ್ತಿಸುವ ಈ ನಾಡದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಿ ಎಂದು ಕನ್ನಡಿಗರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತನ್ನ ಆಕ್ರೋಶ ಹೊರ ಹಾಕಿದ್ದಾರೆ.












Click it and Unblock the Notifications