Bengaluru: ಬೀದಿನಾಯಿಗಳ ಸಮೀಕ್ಷೆಗೆ ಪಾಲಿಕೆ ಜತೆ ಕೈ ಜೋಡಿಸಿದ IISc
ಬೆಂಗಳೂರು, ಜುಲೈ 20: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಇದೇ ತಿಂಗಳ 11ನೇ ಜುಲೈ ನಿಂದ ಬೀದಿ ನಾಯಿಗಳ ಸಮೀಕ್ಷೆ ಆರಂಭಿಸಲಾಗಿದೆ. ಈ ವರ್ಷ ಬಿಬಿಎಂಪಿ ಸ್ಮಾರ್ಟ್ ಆಪ್ ಮೂಲಕ ಸಮೀಕ್ಷೆ ನಡೆಸುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಮಟ್ಟದ ಸಂಸ್ಥೆಯೊಂದು ಕೈ ಜೋಡಿಸಿದೆ.
ಬಿಬಿಎಂಪಿಯು VayDyn ಸ್ಟಾರ್ಟ್ ಅಪ್ ಕೃತಕ ಬುದ್ಧಿಮತ್ತೆ ಮತ್ತು ರೊಬೊಟಿಕ್ಸ್ ಟೆಕ್ನಾಲಜಿ ಪಾರ್ಕ್- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (@ARTPARK IISc) ಡ್ರೋನ್ ತಂತ್ರಜ್ಞಾನ ಬಳಸಿಕೊಂಡು ಬಿಬಿಎಂಪಿ ನಾಯಿಗಳ ಸಮೀಕ್ಷೆಗೆ ಮುಂದಾಗಿದೆ. ಈ ಮೂಲಕ ಐಐಎಸ್‌ಸಿ ಬಿಬಿಎಂಪಿ ಜೊತೆ ಕೈ ಜೋಡಿಸಿದೆ.

ಬೆಂಗಳೂರು ನಗರದ ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಿರುಗಾಡುವ ಬೀದಿ ನಾಯಿಗಳ ಎಣಿಕೆ ಕಾರ್ಯದ ಪ್ರಾಯೋಗಿಕ ಯೋಜನೆ ಪ್ರಾರಂಭಿಸಲು ಬಿಬಿಎಂಪಿ ಜತೆ ಐಐಎಸ್‌ಸಿ ಕೈ ಜೋಡಿಸಿದೆ. ಬೀದಿ ನಾಯಿಗಳ ಸಮೀಕ್ಷೆಗೆ ಡ್ರೋನ್ ಗಳನ್ನು ಬಳಸುತ್ತಿರುವುದು ಭಾರತದಲ್ಲಿ ಇದೇ ಮೊದಲ ಯೋಜನೆ ಎಂದು ಬಿಬಿಎಂಪಿ ತಿಳಿಸಿದೆ.
ನಾಯಿಗಳ ಗುರುತಿಸುವಿಕೆಯಲ್ಲಿ ಎಐ ಯಶಸ್ವಿ
ಮೊದಲ ಹಂತದಲ್ಲಿ ಹುಳಿಮಾವು, ಸಾರಕ್ಕಿ, ಸೀಗೇಹಳ್ಳಿ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆಗಳನ್ನು ಪರಿಕಲ್ಪನೆಯ ಪುರಾವೆಯಾಗಿ ಆಯ್ಕೆ ಮಾಡಲಾಗಿರುತ್ತದೆ. ಡ್ರೋನ್ ಗಳು ನಾಯಿಗಳ ಚಿತ್ರಗಳನ್ನು ಸೆರೆ ಹಿಡಿಯಲು ಮತ್ತು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಬೀದಿ ನಾಯಿಗಳನ್ನು ಗುರುತಿಸಲು ಯಶಸ್ವಿ ಆಗಿದೆ.
ಡ್ರೋನ್ ಸಮೀಕ್ಷೆಯ ದತ್ತಾಂಶವನ್ನು ಮುಂಬರುವ ದಿನಗಳಲ್ಲಿ ವಿಶ್ಲೇಷಿಸಲಾಗುವುದು ಮತ್ತು ಸಾಂಪ್ರದಾಯಿಕ ಕ್ಷೇತ್ರ ಸಮೀಕ್ಷೆ ತಂಡವು ಸಂಗ್ರಹಿಸಿದ ದತ್ತಾಂಶದೊಂದಿಗೆ(ಡೇಟಾ) ತಾಳೆ ಮಾಡಲಾಗುತ್ತದೆ. ದತ್ತಾಂಶವು ಪರಸ್ಪರ ಸಮಾನತೆ ಹೊಂದಿದ್ದರೆ, ಮುಂಬರುವ ವರ್ಷಗಳಲ್ಲಿ ನಗರದಲ್ಲಿನ ಎಲ್ಲಾ ಸುರಕ್ಷಿತ ಮತ್ತು ಮುಕ್ತ ಹಾರಾಟದ ಸ್ಥಳಗಳನ್ನು ಡ್ರೋನ್ ಗಳೊಂದಿಗೆ ಸಮೀಕ್ಷೆ ಮಾಡಲಾಗುತ್ತದೆ.

ರಾತ್ರಿ ವೇಳೆಯಲ್ಲೂ ನಾಯಿಗಳ ಸಮೀಕ್ಷೆ
ಸಾಂಪ್ರದಾಯಿಕ ಕ್ಷೇತ್ರ ಸಮೀಕ್ಷೆ ವಿಧಾನಗಳಿಗೆ ಹೋಲಿಸಿದರೆ ಸಮಯ ಮತ್ತು ವೆಚ್ಚದಲ್ಲಿ ಪರಿಣಾಮಕಾರಿಯಾಗಿ ಉಳಿತಾಯವಾಗಲಿದೆ. ಹಗಲು ಮತ್ತು ರಾತ್ರಿಯ ಸಮಯದಲ್ಲೂ ಕೂಡ ಸಮೀಕ್ಷೆಯನ್ನು ಕೈಗೊಳ್ಳಬಹುದಾಗಿದ್ದು, ಸಮೀಕ್ಷೆಯ ನಿರ್ದಿಷ್ಟತೆಯನ್ನು ಹೆಚ್ಚಿಸಲಿದೆ.
ಪೈಲಟ್ ಯೋಜನೆಯ ಸಮಯದಲ್ಲಿ, ತಂಡವು ವಾಯುಪ್ರದೇಶದ ನಿಯಮಗಳು ಮತ್ತು ಸುರಕ್ಷತೆಯ ಕಾಳಜಿಗಳೊಂದಿಗೆ ನಗರ ವಾಯು ಪ್ರದೇಶಗಳಲ್ಲಿ ಡ್ರೋನ್ ಗಳನ್ನು ನಿರ್ವಹಿಸುವಲ್ಲಿ ಕೆಲವು ಸವಾಲುಗಳನ್ನು ಗುರುತಿಸಿಲಾಗಿದೆ. ಆದರೆ ಸ್ವಾಯತ್ತ ಡ್ರೋನ್ ಗಳಂತಹ ಹೊಸ ಸ್ವದೇಶಿ ತಂತ್ರಜ್ಞಾನಗಳೊಂದಿಗೆ ಸ್ವತಂತ್ರ ಡ್ರೋನ್ ಗಳನ್ನು ಬಳಸಿಕೊಂಡು ಮತ್ತು ಉತ್ತಮ ಆನ್-ಬೋರ್ಡ್ ಕ್ಯಾಮೆರಾ ಸಿಸ್ಟಮ್ ಗಳನ್ನು ಉಪಯೋಗಿಸಿಕೊಂಡು ಇಂತಹ ಕಾರ್ಯಾಚರಣೆ ಪರಿಣಾಮಕಾರಿಯಾಗಿ ಮಾಡಬಹುದೆಂದು ಆಶಿಸಬಹುದಾಗಿದೆ.
ರೋಗದ ಕಣ್ಗಾವಲು, ನಿರ್ಮಾಣ ತಪಾಸಣೆ, ಅತಿಕ್ರಮಣಗಳು, ವಿಪತ್ತು ನಿರ್ವಹಣೆ ಇತ್ಯಾದಿಗಳಂತಹ ವ್ಯಾಪಕ ಶ್ರೇಣಿಯ ಉಪಯೋಗಳಿಗಾಗಿ ನಗರ ವಾಯು ಪ್ರದೇಶಗಳಲ್ಲಿ ಬೃಹತ್ ಪ್ರಮಾಣದಲ್ಲಿ ಡ್ರೋನ್ ತಂತ್ರಜ್ಞಾನವನ್ನು ಮುಂದಿನ ದಿನಗಳಲ್ಲಿ ಬಳಸಿಕೊಳ್ಳಬಹುದಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications