• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

500 ಕೆಜಿ ತೂಕದ ಗೇಟ್ ಬಿದ್ದು ಐಐಎಸ್ಸಿ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಸಾವು

|
Google Oneindia Kannada News

ಬೆಂಗಳೂರು, ಜುಲೈ 1: ಸುಮಾರು 500 ಕೆಜಿ ತೂಕದ ಗೇಟ್ ಬಿದ್ದು ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಭಾರತೀಯ ವಿಜ್ಞಾನ ಸಂಸ್ಥೆ ಮುಖ್ಯ ದ್ವಾರದಲ್ಲಿರುವ ಗೇಟ್ ಬಿದ್ದು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಒಡಿಶಾ ಮೂಲದ ಗೌತಮ್ ಬಿಸ್ವಾಲ್(24) ಮೃತರು. ಘಟನೆಯಲ್ಲಿ ಬಿಹಾರದ ಅನಿಲ್‌ಕುಮಾರ್ ಹಾಗೂ ಒಡಿಶಾದ ವೈನಾಯಕ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲಬುರಗಿಯಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರ ಸಾವು ಕಲಬುರಗಿಯಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರ ಸಾವು

ಸದ್ಯ ಸಂಸ್ಥೆಯ ಎಂಜಿನಿಯರ್ ಹಾಗೂ ಗೇಟ್ ತಯಾರಿಸಿದ ವ್ಯಕ್ತಿಯ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಿಸಲಾಗುವುದು ಎಂದು ಸದಾಶಿವನಗರ ಪೊಲೀಸರು ತಿಳಿಸಿದ್ದಾರೆ.

ಬಿಸ್ವಾಲ್ ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ, ಖಾಸಗಿ ಏಜೆನ್ಸಿ ಮೂಲಕ ಐಐಎಸ್ಸಿ ಭದ್ರತಾ ಸಿಬ್ಬಂದಿಯಾಗಿ ನೇಮಕಗೊಂಡಿದ್ದ.ಐಐಎಸ್ಸಿ ಸಮೀಪವೇ ಕೊಠಡಿಯೊಂದರಲ್ಲಿ ಉಳಿದುಕೊಂಡಿದ್ದರು.

ಭಾನುವಾರ ಬೆಳಗಿನ ಜಾವ ಮೊದಲ ಪಾಳಿಯಲ್ಲಿ ಬಿಸ್ವಾಲ್ ಕೆಲಸಕ್ಕೆ ಬಂದಿದ್ದರು. ಮಧ್ಯಾಹ್ನ ಗಂಟೆ ಹೊತ್ತಿಗೆ ಐಐಎಸ್ಸಿಗೆ ವ್ಯಕ್ತಿಯೊಬ್ಬರು ಕಾರಿನಲ್ಲಿ ಬಂದಿದ್ದು, ಬಿಸ್ವಾಲ್ ಅವರು ಸ್ಲೈಡಿಂಗ್ ಗೇಟ್ ತೆಗೆಯಲು ಮುಂದಾಗಿದ್ದಾರೆ. ಬಳಿಕ ಗೇಟ್ ತೆಗೆಯುವಾಗ ಸುಮಾರು ಕೆಜಿ ಯ ಗೇಟ್ ಏಕಾಏಕಿ ಬಿಸ್ವಾಲ್ ಮೇಲೆ ಬಿದ್ದಿದೆ ಅಲ್ಲಿಯೇ ಬಿಸ್ವಾಲ್ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿರುವ ಡಸಾಲ್ಟ್ ಕಂಪನಿಯ ಗೇಟು ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆಯೂ ನಡೆದಿತ್ತು.

English summary
A security gaurd of IISC Gowtham Biswal hails from Odisha died when sliding gate weighed around 500 kg and 6 feet high.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X