ಪರವಾನಗಿ ಇಲ್ಲದೆ ಪ್ರಾಣಿ ವಧೆ: 5 ವರ್ಷ ಜೈಲು
ಬೆಂಗಳೂರು, ಫೆಬ್ರವರಿ 01 : ಬಿಬಿಎಂಪಿಯಿಂದ ಪರವಾನಗಿ ಪಡೆಯದೆ ಅನಧಿಕೃತವಾಗಿ ಪ್ರಾಣಿವಧೆ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ 1964, ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ಹಾಗೂ ಪ್ರಾಣಿ ಸಾಗಾಣಿಕೆ ಕಾಯ್ದೆ 1978 ರ ಪ್ರಕಾರ ವಧೇಗೆ ಅರ್ಹವಾದ , ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃಥ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಬೇಕಿದೆ.
ಆದರೆ, ಇತ್ತೀಚಿನ ದಿನಗಳಲ್ಲಿ ಮಾಂಸ ಮಾರಾಟಕ್ಕೆ ಪರವಾನಗಿ ಪಡೆದಿರುವ ಅಂಗಡಿಗಳಲ್ಲಿ ದನ, ಕುರಿ, ಮೇಕೆ ಮತ್ತು ಹಂದಿ ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ.
ಪರವಾನಗಿ ಇಲ್ಲದಿದ್ದರೂ ಪ್ರಾಣಿ ವಧೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳು ನಿರ್ಧರಿಸಿದ್ದಾರೆ.

ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ 5 ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ. ಅನಧಿಕೃತವಾಗಿ ಪ್ರಾಣಿಗಳ ಸಾಗಣೆಗೂ ಕಠಿಣ ಶಿಕ್ಷೆ ವಿಧಿಸಲು ನಿರ್ಧರಿಸಲಾಗಿದೆ. ಇನ್ನು, ಕೋಳಿಮಾಂಸ ಮಾರಾಟ ಅಂಗಡಿಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ನಿಗದಿತ ವಾಹನಗಳಲ್ಲಿ ನಿಗದಿತ ಸ್ಥಳಗಳಿಗೆ ಸಾಗಣೆ ಮಾಡಬೇಕು ಎಂದು ಸೂಚಿಸಲಾಗಿದೆ.












Click it and Unblock the Notifications