• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

|
Google Oneindia Kannada News

ಬೆಂಗಳೂರು ಜುಲೈ 1: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಜ್ಞಾ ಕಾರ್ಯಕ್ರಮದ ಪ್ರಯುಕ್ತ ಅಳವಡಿಸಿರುವ ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್ ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮೇಯರ್ ಹಾಗೂ ಆಯುಕ್ತರಿಗೆ ಇಂದು ಭಾರತೀಯ ಜನತಾ ಪಕ್ಷದ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾದ ಕಾರ್ಯಕರ್ತರು ದೂರು ನೀಡಿದರು.

   Zameer Ahmed Khan : ವಿವಾದಕ್ಕೆ ಕಾರಣವಾಯ್ತು ಶಾಸಕ ಜಮೀರ್ ಅಹಮ್ಮದ್ ಖಾನ್ 'ಪಾದಪೂಜೆ'! | Oneindia Kannada

   ಇಂದು ಬೆಳಿಗ್ಗೆ ಜಿಲ್ಲಾಧ್ಯಕ್ಷರಾದ ಅಭಿಲಾಶ್ ರೆಡ್ಡಿ ಎಂ ನೇತೃತ್ವದಲ್ಲಿ ದೂರು ನೀಡಿದ ನಂತರ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಬಿಬಿಎಂಪಿ ನಗರದ ಸ್ವಾಸ್ಥ್ಯ, ಸೌಂದರ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಆದರೆ, ನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್‌ ಗಳನ್ನು ಹಾಕಬಾರದು ಎನ್ನುವ ಆದೇಶವಿದ್ದರೂ ಕೂಡಾ ಪ್ರತಿಜ್ಞಾ ಕಾರ್ಯಕ್ರಮದ ಅಂಗವಾಗಿ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್‌ ಗಳನ್ನು ಅಳವಡಿಸಿ ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದ್ದಾರೆ.

   ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್ ಹಾಗೂ ಫ್ಲೆಕ್ಸ್ ಗಳನ್ನು ಈ ಕೂಡಲೇ ತಗೆದು ಹಾಕಿ ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ ಆಯುಕ್ತರಾದ ಅನಿಲ್ ಕುಮಾರ್ ಅವರನ್ನು ಒತ್ತಾಯಿಸಿದರು

   ''ಶ್ರೀರಾಮುಲು ವಿರುದ್ಧ ಏಕೆ ಕ್ರಮ ಇಲ್ಲ? ನಾವು ಜನರಿಗಾಗಿ ಪ್ರತಿಭಟನೆ ಮಾಡಿದ್ದೀವಿ''''ಶ್ರೀರಾಮುಲು ವಿರುದ್ಧ ಏಕೆ ಕ್ರಮ ಇಲ್ಲ? ನಾವು ಜನರಿಗಾಗಿ ಪ್ರತಿಭಟನೆ ಮಾಡಿದ್ದೀವಿ''

   ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಈ ಕೂಡಲೇ ಅನಧಿಕೃತವಾಗಿ ಹಾಕಿರುವ ಬ್ಯಾನರ್ ಹಾಗೂ ಫ್ಲೆಕ್ಸ್ ಗಳನ್ನು ತಗೆದು ಹಾಕಲು ಹಾಗೂ ಅಂತಹ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಿದರು.

   ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗಳಾದ ವಿಜಯೇಂದ್ರ, ರಾಜೇಶ್ ಆರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

   English summary
   Bengaluru BJP Yuva Morcha has filed a complaint with BBMP mayor against Congress party for illegally placing flex, hoarding, banner in the city.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X