ಅಕ್ರಮ ಚಿನ್ನ ಕಳ್ಳಸಾಗಣೆ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3 ಕೆಜಿ ಚಿನ್ನ ವಶ
ಬೆಂಗಳೂರು, ಅಕ್ಟೋಬರ್ 24: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.76 ಕೋಟಿ ಮೌಲ್ಯದ ಬರೋಬ್ಬರಿ 3 ಕೆಜಿಯಷ್ಟು ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳ ವಶಪಡಿಸಿಕೊಂಡಿದ್ದಾರೆ.
ವಿವಿಧ ದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನಾಲ್ವರು ಪ್ರಯಾಣಿಕರಿಂದ 1.76 ಕೋಟಿ ಮೌಲ್ಯದ 3 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೌಲಾಲಂಪುರ, ದುಬೈ ಮತ್ತು ಕೊಲಂಬೊದಿಂದ ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದರು. ಅವರಿಂದ ಬಿಸ್ಕೆಟ್ ಮತ್ತು ಬೆಳ್ಳಿ ಸರದ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು.

ಚಿನ್ನ ವಶಪಡಿಸಿಕೊಳ್ಳುವ ಬಗ್ಗೆ ತನಿಖೆ ನಡೆಯುತ್ತಿದ್ದು, ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಅಕ್ಟೋಬರ್ 20 ಮತ್ತು 21 ರ ನಡುವೆ ಇತರ ದೇಶಗಳಿಂದ ಚಿನ್ನ ಕಳ್ಳಸಾಗಣೆಗಾಗಿ ಮೂವರು ಪ್ರಯಾಣಿಕರನ್ನು ಬಂಧಿಸಿದ್ದಾರೆ. 17.9 ಲಕ್ಷ ಮೌಲ್ಯದ 300.95 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಭಾರತೀಯ ಮೂಲದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆ ಧರಿಸಿದ್ದ ರವಿಕೆಯೊಳಗೆ ಚಿನ್ನವನ್ನು ಬಚ್ಚಿಟ್ಟಿದ್ದರು ಎಂದು ತಿಳಿದು ಬಂದಿದೆ.
#IndianCustomsAtWork Officers of Bengaluru Air Customs intercepted 4 pax who arrived from Kuala Lumpur, Dubai & Colombo on 22.10.2023 and seized approx. 3kg of gold worth Rs.1.76 crore. 2 pax were arrested and further investigation is under process.
— Bengaluru Customs (@blrcustoms) October 23, 2023
@cbic_indian pic.twitter.com/jIy8suqt9e
34.4 ಲಕ್ಷ ಮೌಲ್ಯದ 578.27 ಗ್ರಾಂ ಚಿನ್ನಾಭರಣದೊಂದಿಗೆ ಮಲಸಿಯಾ ಮೂಲದ ಮಹಿಳೆಯನ್ನು ಬಂಧಿಸಲಾಗಿದೆ. ಚಿನ್ನವನ್ನು ಪೇಸ್ಟ್ ರೂಪದಲ್ಲಿ ಆಕೆಯ ಗುದನಾಳದಲ್ಲಿ ಬಚ್ಚಿಟ್ಟಿದ್ದರು. ಮಹಿಳೆ ಕೌಲಾಲಂಪುರದಿಂದ ಎಕೆ-053 ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಕುವೈತ್‌ನಿಂದ ಬಂದಿದ್ದ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು 15.26 ಲಕ್ಷ ರೂಪಾಯಿ ಮೌಲ್ಯದ 254 ಗ್ರಾಂ ಚಿನ್ನ ಮತ್ತು 1.49 ಲಕ್ಷ ರೂಪಾಯಿ ಮೌಲ್ಯದ ಒಂದು ಐಫೋನ್ ಪ್ರೊ 14 ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕರು ಡ್ರೈ ಫ್ರೂಟ್ಸ್ ಪ್ಯಾಕೆಟ್‌ನಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಯತ್ನಿಸಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications