• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

20 ಕೋಟಿ ಜಾಗವನ್ನು ವಶಪಡಿಸಿಕೊಂಡ ಬಿಬಿಎಂಪಿ

|

ಬೆಂಗಳೂರು, ಆ.5 : ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಜೆಸಿಬಿಗಳು ಘರ್ಜಿಸಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 16 ಮನೆಗಳನ್ನು ನೆಲಸಮಗೊಳಿಸಿ, ಸುಮಾರು 20 ಕೋಟಿ ರೂ. ಮೌಲ್ಯದ ಜಾಗವನ್ನು ಪಾಲಿಕೆ ತನ್ನ ವಶಕ್ಕೆ ಪಡೆದಿದೆ.

ಮಂಗಳವಾರ ಬಿಬಿಎಂಪಿ ಅಧಿಕಾರಿಗಳು ಸ್ಥಳೀಯರ ತೀವ್ರ ವಿರೋಧದ ನಡುವೆಯೇ ಹೆಬ್ಬಾಳ ಸಮೀಪದ ವಾರ್ಡ್ ನಂಬರ್ 8 ಕೋಡಿಗೆಹಳ್ಳಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 16 ಮನೆಗಳನ್ನು ನೆಲಸಮಗೊಳಿಸಿದರು. ಈ ಮನೆಗಳಿದ್ದ ಸ್ಥಳದ ಮೌಲ್ಯ ಸುಮಾರಿ 20 ಕೋಟಿ ಎಂದು ಅಂದಾಜಿಸಲಾಗಿದೆ. ಮನೆಗಳನ್ನು ತೆರವುಗೊಳಿಸಿ ಜಾಗವನ್ನು ಪಾಲಿಕೆ ವಶಕ್ಕೆ ಪಡೆಯಲಾಯಿತು.

ಬಿಬಿಎಂಪಿ ಅಧಿಕಾರಿಗಳು ಜೆಸಿಬಿ ಜತೆ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಸ್ಥಳೀಯರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದರು. ಯಾವುದೇ ನೋಟಿಸ್ ನೀಡದೆ ಮನೆಗಳನ್ನು ಧ್ವಂಸಗೊಳಿಸಲಾಗುತ್ತಿದೆ, ಇದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಜೆಸಿಬಿಗಳಿಗೆ ಅಡ್ಡವಾಗಿ ನಿಂತರು. ಈ ವೇಳೆ ಬಿಬಿಎಂಪಿ ಅಧಿಕಾರಿಗಳು ಮತ್ತು ನಿವಾಸಿಗಳ ನಡುವೆ ಮಾತಿನ ಚಕಮಕಿ ನಡೆಯಿತು. [ವೆಬ್‌ಸೈಟ್‌ನಲ್ಲಿ ಒಣತ್ಯಾಜ್ಯ ಮಾರಿಬಿಡಿ]

ಈ ಜಾಗ ನಮ್ಮದು ಎಂದು ನ್ಯಾಯಾಲಯ ಆದೇಶ ನೀಡಿದೆ. ಬಿಬಿಎಂಪಿಯವರು ನಮ್ಮನ್ನು ಹೊರದಬ್ಬಿದರೆ ನಾವು ಎಲ್ಲಿ ಹೋಗಬೇಕು ? ಏನು ಮಾಡಬೇಕು ಎಂದು ಅಳಲು ತೋಡಿಕೊಂಡರು. ಕೋರ್ಟ್ ಆದೇಶದಂತೆ ಮನೆ ತೆರವುಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಸ್ಥಳಕ್ಕೆ ಪೊಲೀಸರನ್ನು ಕರೆಸಿದರು.

ಪೊಲೀಸರು ಆಗಮಿಸಿದ ಬಳಿಕ ಬಿಬಿಎಂಪಿ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಆರಂಭಿಸಿದರು. ಮನೆಗಳನ್ನು ಕಳೆದುಕೊಂಡ ನಿವಾಸಿಗಳು ಬಿಬಿಎಂಪಿ ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Bruhat Bengaluru Mahanagara Palike(BBMP) on Tuesday demolished an illegally constructed house near Hebbala Kodigehalli ward no 8 and recovered site.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more