• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಅಶೋಕ್‌ಗೆ ಕ್ಲೀನ್ ಚಿಟ್

|
Google Oneindia Kannada News

ಬೆಂಗಳೂರು, ನವೆಂಬರ್ 09 : ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಆರ್.ಅಶೋಕ್ ಅವರಿಗೆ ಲೋಕಾಯುಕ್ತ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. 2011ರಲ್ಲಿ ಅಶೋಕ್ ವಿರುದ್ಧ ಡಿನೋಟಿಫಿಕೇಷನ್ ದೂರು ದಾಖಲಾಗಿತ್ತು.

ಜಯಕುಮಾರ್ ಹಿರೇಮಠ್ ಎಂಬುವವರು ಆರ್.ಅಶೋಕ್ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಬೆಂಗಳೂರು ಉತ್ತರ ತಾಲೂಕಿನ ಲೊಟ್ಟೆಗೊಲ್ಲಹಳ್ಳಿಯಲ್ಲಿ 2.14 ಎಕರೆ ಭೂಮಿಯನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿ ಮಾಡಿ ಡಿನೋಟಿಫೈ ಮಾಡಿಸಿದ್ದಾರೆ ಎಂದು ಆರೋಪಿಸಿದ್ದರು. [ಅಶೋಕ್ ಗೆ ತಾತ್ಕಾಲಿಕ ರಿಲೀಫ್]

ಈ ದೂರಿನ ಬಗ್ಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ದೂರುದಾರರ ಆರೋಪಗಳಲ್ಲಿ ಹುರುಳಿಲ್ಲ. ಭೂಮಿ ಖರೀದಿ ಮಾಡುವಾಗ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಲೋಕಾಯುಕ್ತ ನ್ಯಾಯಾಲಯಕ್ಕೆ 1, 400 ಪುಟಗಳ ಬಿ ರಿಪೋರ್ಟ್ ಸಲ್ಲಿಸಿದ್ದರು. [ಯಡಿಯೂರಪ್ಪ ವಿರುದ್ಧ ತನಿಖೆ, ಸುಪ್ರೀಂ ಮೆಟ್ಟಿಲೇರಿದ ಸರ್ಕಾರ]

ದೂರುದಾರ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಈ ಬಿ ರಿಪೋರ್ಟ್‌ ಅನ್ನು ಪ್ರಶ್ನಿಸಿದ್ದರು ಮತ್ತು ಪುನಃ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದರು. ಆದರೆ, ನ್ಯಾಯಾಲಯ ಲೋಕಾಯುಕ್ತ ಪೊಲೀಸರು ನೀಡಿರುವ ತನಿಖಾ ವರದಿಯನ್ನು ಎತ್ತಿಹಿಡಿದಿದ್ದು, ಅಶೋಕ್ ಅವರಿಗೆ ಕ್ಲೀನ್ ಚಿಟ್ ನೀಡಿದೆ.

ಹೈಕೋರ್ಟ್‌ಗೆ ಮೊರೆ : ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಆರ್.ಅಶೋಕ್ ಅವರಿಗೆ ಕ್ಲೀನ್ ಚಿಟ್ ಕೊಟ್ಟ ಲೋಕಾಯುಕ್ತ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ಜಯಕುಮಾರ್ ಹಿರೇಮಠ್ ನಿರ್ಧರಿಸಿದ್ದಾರೆ.

English summary
Lokayukta court has been given a clean chit to former Deputy Chief Minister R. Ashok in the illegal land denotification case. Court admitted a B report (false) submitted by investigating officials. In 2011 social activist Jayakumar Hiremath filed the case against R. Ashok.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X