ಡಿ.3ರ ತನಕ ಗಾಲಿ ಜನಾರ್ದನ ರೆಡ್ಡಿಗೆ ಜೈಲು

ಬೆಂಗಳೂರು, ನ.23: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಡಿಸೆಂಬರ್ 03ರ ತನಕ ವಿಸ್ತರಣೆ ಮಾಡಲಾಗಿದೆ. ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನಲೆಯಲ್ಲಿ ಗಾಲಿ ರೆಡ್ಡಿ ಅವರನ್ನು ಸೋಮವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ನ.20ರಂದು ಬಂಧಿಸಲಾಗಿತ್ತು. ಜನಾರ್ದನ ರೆಡ್ಡಿ ಅವರ ವಿರುದ್ಧ ಹೊಸದಾಗಿ ಕೇಸ್ ದಾಖಲಿಸಿಕೊಂಡು ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ ಐಟಿ) ಬಂಧನ ಮಾಡಿ ಲೋಕಾಯುಕ್ತ ವಿಶೇಷ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ನ. 23ರ ತನಕ ಎಸ್ ಐಟಿ ವಶಕ್ಕೆ ನೀಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. [ರೆಡ್ಡಿ ಅರೆಸ್ಟ್, ಸಿದ್ದು ಸರ್ಕಾರ ವಿರುದ್ಧ ಸೋಮಶೇಖರ್ ಗರಂ]

Janardhana Reddy

ಸುಮಾರು ಎರಡು ವರ್ಷಕ್ಕೂ ಅಧಿಕ ಕಾಲ ಜೈಲಿನಲ್ಲೇ ಕಾಲದೂಡಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಈಗಾಗಲೇ 13 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

ಆದರೆ, ಈಗ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿಕೊಳ್ಳಲು ಏನು ಕಾರಣ, ಇದೆಲ್ಲ ಮಾಜಿ ಶಾಸಕ ದಿವಾಕರ್ ಬಾಬು ಅವರ ಕುತಂತ್ರವಾಗಿದೆ. ನ.25 ರಂದು ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ ಎಂದು ಗಾಲಿ ರೆಡ್ಡಿ ಅವರ ಪರ ವಕೀಲ ಸಿ.ಎಚ್ ಹನುಮಂತರಾಯ ಅವರು ಹೇಳಿದ್ದಾರೆ.

ಗಾಲಿ ರೆಡ್ಡಿ ಅವರ ವಿಚಾರಣೆ ನಡೆಸುವುದಕ್ಕೂ ಮುನ್ನ ಬಳ್ಳಾರಿ, ಬೆಂಗಳೂರಿನ 14 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಹಿಂದ್ ಟ್ರೇಡರ್ಸ್ ಹಾಗೂ ಮಧುಶ್ರೀ ಎಂಟರ್ ಪ್ರೈಸಸ್ ನಿಂದ ಅಕ್ರಮ ರಫ್ತು ಸಾಗಿಸಲಾಗಿದ್ದು, ಸ್ವಸ್ತಿಕ್ ನಾಗರಾಜ್, ಖಾರಪುಡಿ ಮಹೇಶ್ ಅವರು ಸಾಗಾಣಿಕೆ ಜವಾಬ್ದಾರಿ ವಹಿಸಿಕೊಂಡಿದ್ದರು ಎನ್ನಲಾಗಿದೆ.

ಲೋಕಾಯುಕ್ತ ಎಸ್ ಐಟಿ ತಂಡ ಐಪಿಸಿ ಸೆಕ್ಷನ್ 407, 420 ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಎಫ್ ಐಆರ್ ಹಾಕಿರುವ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ, ಸದ್ಯಕ್ಕೆ ವಿಚಾರಣೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+