ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಆನಂದ್ ಸಿಂಗ್, ಬಿ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್

|
Google Oneindia Kannada News

ಬೆಂಗಳೂರು, ಜನವರಿ 10: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಶಾಸಕರಾದ ಆನಂದ್ ಸಿಂಗ್ ಹಾಗೂ ಬಿ ನಾಗೇಂದ್ರ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಆರೋಪಿಗಳಾದ ಆನಂದ್ ಸಿಂಗ್ ಹಾಗೂ ಬಿ ನಾಗೇಂದ್ರ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

Illegal Mining : NBW issued against MLA Anand Singh and B Nagendra

ಶಾಸಕ ಆನಂದ್ ಸಿಂಗ್, ಬಿ.ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್ ಶಾಸಕ ಆನಂದ್ ಸಿಂಗ್, ಬಿ.ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್

ಆನಂದ್ ಸಿಂಗ್ ಹಾಗೂ ಬಿ ನಾಗೇಂದ್ರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಿಬಿಐ ಮತ್ತು ವಿಶೇಷ ತನಿಖಾ ತಂಡಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿವೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ನಡೆದ ವಿಚಾರಣೆಗೆ ವೇಳೆ ಇಬ್ಬರು ಗೈರಾಗಿದ್ದಾರೆ. ಸತತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಮತ್ತು ಬಿ. ನಾಗೇಂದ್ರ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

English summary
Illegal Mining : Non Bailable Warrant issued against MLA Anand Singh and B Nagendra by Special court in Bengaluru today(Jan 10)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X