ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಪತ್ನಿ ಮತ್ತು ಪುತ್ರ ವಿಚಾರಣೆ
ಬೆಂಗಳೂರು, ನವೆಂಬರ್,23: ಐಎಂಎ ಬಹುಕೋಟಿ ವಂಚನೆ ಕಂಪನಿಯಿಂದ ಅಕ್ರಮ ಹಣ ಪಡೆದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಕಚೇರಿ ಹಾಗೂ ಪುತ್ರ ರುಮಾನ್ ಅವರ ಕಚೇರಿ ಮೇಲೂ ದಾಳಿ ನಡೆಸಿ ಸಿಬಿಐ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬೇಗ್ ಮನೆ ಮೇಲೆ ದಾಳಿ ನಡೆಸಿದಾಗ ಅವರ ಪುತ್ರ ರುಮಾನ್ ಹಾಗೂ ಅವರ ಪತ್ನಿಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ತದನಂತರ ರೋಷನ್ ಬೇಗ್ ಅವರ ಕೊಠಡಿ ಪರಿಶೀಲಿಸಿದ್ದಾರೆ. ಐಎಂಎ ನಿಂದ ಪಡೆದಿರುವ ಉಡುಗೊರೆ ಕುರಿತು ಬೇಗ್ ಪತ್ನಿ ಹಾಗೂ ಪುತ್ರ ರುಮಾನ್ ನನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಅಧಿಕಾರಿಗಳ ಒಂದು ತಂಡ ಮನೆ ಶೋಧ ಕಾರ್ಯ ಮುಂದವರೆಸಿದೆ. ಮತ್ತೊಂದು ತಂಡ ವಿಚಾರಣೆ ನಡೆಸುತ್ತಿದೆ. ರೋಷನ್ ಬೇಗ್ ಅವರ ವ್ಯವಹಾರಕ್ಕೆ ಸಂಬಂಧಿಸಿದಂತೆ ಶೋಧ ನಡೆಸುತ್ತಿದೆ.
ಬೇಗ್ ಬಂಧನಕ್ಕೆ ಖಾನ್ ಕಾರಣ: ಮಾಜಿ ಸಚಿವ ರೋಷನ್ ಬೇಗ್ ಐಎಂಎನಿಂದ ಕೋಟ್ಯಂತರ ರೂಪಾಯಿ ಪಡೆದಿರುವ ಬಗ್ಗೆ ಮನ್ಸೂರ್ ಖಾನ್ ಸಿಬಿಐ ವಿಚಾರಣೆ ವೇಳೆ ಬಾಯಿಬಿಟ್ಟಿದ್ದ. ಮನ್ಸೂರ್ ಹೇಳಿಕೆಗೆ ಸಂಬಂಧಿಸಿದ ಕೆಲವು ದಾಖಲೆಗಳು ಸಿಬಿಐ ಕೈ ಸೇರಿತ್ತು. ರೋಷನ್ ಬೇಗ್ ಅವರಿಗೆ 400 ಕೋಟಿ ಮೊತ್ತದ ಹಣ, ಆಭರಣ, ಕಾರು ಉಡುಗೊರೆ ಕೊಟ್ಟಿರುವ ಬಗ್ಗೆ ಮನ್ಸೂರ್ ವಿಡಿಯೋ ಮಾಡಿ ಆರೋಪಿಸಿದ್ದ. ಈ ಕುರಿತ ಅಡಿಯೋ ಕೂಡ ಬಿಡುಗಡೆ ಮಾಡಿದ್ದ. ವಿಡಿಯೋ ಮತ್ತು ಅಡಿಯೋ ಪರಿಶೀಲಿಸಿದ್ದ ಸಿಬಿಐ ಮನ್ಸೂರ್ ಖಾನ್ ಅವರನ್ನುವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿತ್ತು. ಹೇಳಿಕೆ ಆಧರಿಸಿ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದಾಗ ಕೆಲವು ದಾಖಲೆಗಳು ಲಭ್ಯವಾಗಿದ್ದವು.

ಜೈಲಿನಲ್ಲಿದ್ದ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ನಡೆಸಿದ್ದರು. ಬಳಿಕ ರೋಷನ್ ಬೇಗ್ ವ್ಯವಹಾರದ ಬಗ್ಗೆ ಸಿಬಿಐ ಅಧಿಕಾರಿಗಳು ಕಣ್ಣಿಟ್ಟಿದ್ದರು. ರೋಷನ್ ಬೇಗ್ ಅವರಿಗೆ ಹಣ ಹಾಗೂ ಉಡುಗೊರೆ ಕೊಟ್ಟಿರುವ ಬಗ್ಗೆ ಕೂಡ ಖಾನ್ ಬಾಯಿಬಿಟ್ಟಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications