ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೋಷನ್ ಬೇಗ್‌ಗೆ ಸಂಕಷ್ಟ; ಸಿಬಿಐ ವಶಕ್ಕೆ ನೀಡಿದ ಕೋರ್ಟ್

|
Google Oneindia Kannada News

ಬೆಂಗಳೂರು, ನವೆಂಬರ್ 25 : ಮಾಜಿ ಸಚಿವ ರೋಷನ್ ಬೇಗ್‌ರನ್ನು ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ರೋಷನ್ ಬೇಗ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಲಾಗಿದೆ.

ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ರೋಷನ್ ಬೇಗ್ ಬಂಧಿಸಿತ್ತು. ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು. ರೋಷನ್ ಬೇಗ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಕಸ್ಟಡಿಗೆ ಕೇಳಿ ಸಿಬಿಐ ಅರ್ಜಿ ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಕಸ್ಟಡಿಗೆ ಕೇಳಿ ಸಿಬಿಐ ಅರ್ಜಿ

ಸಿಬಿಐ ಹೆಚ್ಚಿನ ವಿಚಾರಣೆಗಾಗಿ ರೋಷನ್ ಬೇಗ್‌ರನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಬುಧವಾರ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಪತ್ನಿ ಮತ್ತು ಪುತ್ರ ವಿಚಾರಣೆಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಪತ್ನಿ ಮತ್ತು ಪುತ್ರ ವಿಚಾರಣೆ

IMA Ponzi scam : Roshan Baig Is Remanded To Police Custody For 3 Days Till November 28

ನವೆಂಬರ್ 28ರ ತನಕ ರೋಷನ್ ಬೇಗ್‌ರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿತು. ನವೆಂಬರ್ 28 ಬೆಳಗ್ಗೆ 11ಗಂಟೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಸೂಚನೆ ನೀಡಿತು.

ಬಹುಕೋಟಿ ಐಎಂಎ ವಂಚನೆ ಕೇಸ್: ರೋಷನ್ ಬೇಗ್ ಬಂಧಿಸಿದ ಸಿಬಿಐಬಹುಕೋಟಿ ಐಎಂಎ ವಂಚನೆ ಕೇಸ್: ರೋಷನ್ ಬೇಗ್ ಬಂಧಿಸಿದ ಸಿಬಿಐ

ಜಾಮೀನು ಅರ್ಜಿ; ಸಿಬಿಐ ವಿಶೇಷ ನ್ಯಾಯಾಲಯಕ್ಕೆ ರೋಷನ್ ಬೇಗ್ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 28ಕ್ಕೆ ಮುಂದೂಡಿತು. ಜಾಮೀನು ಅರ್ಜಿಗೆ ನವೆಂಬರ್ 27ಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿತು.

ನ್ಯಾಯಾಂಗ ಬಂಧನದಲ್ಲಿದ್ದ ರೋಷನ್ ಬೇಗ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಈಗ ಸಿಬಿಐ ವಶಕ್ಕೆ ನೀಡಿರುವುದರಿಂದ ಸಿಬಿಐ ಅಧಿಕಾರಿಗಳು ಅವರನ್ನು ಹೆಬ್ಬಾಳದಲ್ಲಿರುವ ಸಿಬಿಐ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.

English summary
Former minister Roshan Baig sent for CBI custody till November 28, 2020. CBI arrested Roshan Baig in connection with the IMA scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X