ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ಹಗರಣ: ಪ್ರಭಾವಿಗಳ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಮುಂದಾಗಲಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 22: ಜನಸಾಮಾನ್ಯರಿಂದ ಚಿಕ್ಕಚಿಕ್ಕ ಕಂತುಗಳಲ್ಲಿ ಹಣ ಸಂಗ್ರಹಿಸಿ ದೊಡ್ಡ ಮೊತ್ತದ ಬಡ್ಡಿ ನೀಡುವ ಆಸೆ ತೋರಿಸಿ ಬಡ ಜನರ ಜೀವನದೊಂದಿಗೆ ಆಟವಾಡಿರುವ ಐಎಂಎ ಹಗರಣದಲ್ಲಿ ಹಲವಾರು ಪ್ರಭಾವಿಗಳು ಭಾರಿ ಮೊತ್ತದ ಹಣ ಪಡೆದಿರುವುದು ಪದೇ, ಪದೇ ಸಾಬೀತಾಗುತ್ತಿದೆ. ಈ ಕೂಡಲೇ ಈ ಹಗರಣದಲ್ಲಿ ಕೇಳಿ ಬಂದಿರುವ ಪ್ರಭಾವಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತರಿಗೆ ಕೂಡಲೇ ಹಣ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆಗ್ರಹಿಸಿದರು.

ಐಎಂಎ ಹಗರಣದಲ್ಲಿ ಹಣ ಪಡೆದಿರುವ ಪ್ರಭಾವಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಬಡವರಿಗೆ ಹಂಚಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹಿಸಿದರು. ಮುಖಂಡರಾದ ಹಬೀಬ್ ಉಪಸ್ಥಿತರಿದ್ದರು.

ಐಎಂಎ ವಂಚನೆ : ಹಾಕಿದ್ದು ಇಷ್ಟು! ಬರೋದು ಎಷ್ಟು? ನೀವೇ ಲೆಕ್ಕ ಹಾಕಿಐಎಂಎ ವಂಚನೆ : ಹಾಕಿದ್ದು ಇಷ್ಟು! ಬರೋದು ಎಷ್ಟು? ನೀವೇ ಲೆಕ್ಕ ಹಾಕಿ

ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಶಾಸಕ ಜಮೀರ್ ಅಹಮದ್ ಖಾನ್ 34 ಕೋಟಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ 5 ಕೋಟಿ, ಕುಮಾರಸ್ವಾಮಿ, ಮಾಜಿ ಡಿಸಿಎಂ ಪರಮೇಶ್ವರ್, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ ಸೇರಿದಂತೆ ಇತರೇ ಪ್ರಭಾವಿಗಳು ಹಣ ಮಡೆದಿರುವುದಾಗಿ ಹೇಳಿಕೆ ನೀಡಿರುವ ಮನ್ಸೂರ್ ಖಾನ್ ಆಪ್ತ ನಿಜಾಮುದ್ದೀನ್ ಹೇಳಿಕೆ ಮೇಲೆ ಈ ಕೂಡಲೇ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

IMA Scam: AAP demands distribute seized amount to victims

ಬಡ ಜನರು ಬೆವರು ಸುರಿಸಿ ದುಡಿದ ದುಡ್ಡನ್ನು ಈ ರೀತಿ ಕೊಳ್ಳೆ ಹೊಡೆದಿರುವ ಪ್ರಭಾವಿಗಳಿಗೆ ಜನ ಸಾಮಾನ್ಯರ ಶಾಪ ತಟ್ಟದೆ ಇರದು, ರಾಜ್ಯ ಬಿಜೆಪಿ ಸರ್ಕಾರ ಹಣ ಪಡೆದಿರುವ ಪ್ರಭಾವಿಗಳ ವಿರುದ್ದ ಸೂಕ್ತ ತನಿಖೆ ನಡೆಸದಿದ್ದರೆ ಇವರುಗಳ ಮನೆಗೆ ಮುತ್ತಿಗೆ ಹಾಕುತ್ತದೆ ಎಂದು ಎಚ್ಚರಿಕೆ ನೀಡಿದರು.

ಮನ್ಸೂರ್ ಖಾನ್ ಆಪ್ತ ನಿಜಾಮುದ್ದೀನ್ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಸರ್ಕಾರ ಕ್ರಮ ಜರುಗಿಸಲು ಮುಂದಾಗಬೇಕು ಹಾಗೂ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರಿಗೆ ಹೆಚ್ಚಿನ ಮಟ್ಟದ ಅಧಿಕಾರ ನೀಡಬೇಕು, ಇಂತಹ ಪ್ರಾಮಾಣಿಕ ಅಧಿಕಾರಿಯ ಬೆನ್ನಿಗೆ ಸರ್ಕಾರ ನಿಲ್ಲಬೇಕು ಎಂದು ತಿಳಿಸಿದರು.

ಕಳೆದ ಮೂರು ವರ್ಷಗಳಿಂದ ಎಳೆದಾಡುತ್ತಿರುವ ಈ ಪ್ರಕರಣವನ್ನು ಮುಕ್ತಾಯಗೊಳಿಸುವ ತಾಕತ್ತು ರಾಜ್ಯ ಸರ್ಕಾರಕ್ಕೆ ಇಲ್ಲದಿದ್ದರೆ ಜನರ ಮುಂದೆ ನಿಮ್ಮ ಅಸಾಮರ್ಥ್ಯವನ್ನು ಒಪ್ಪಿಕೊಂಡು ಬಿಡಿ ಎಂದು ಲೇವಡಿ ಮಾಡಿದರು.

Recommended Video

ದೇಣಿಗೆ ಸಂಗ್ರಹಿಸುವ ವಿಧಾನವನ್ನ ಪ್ರಶ್ನಿಸಿದ್ದೇನೆ ಹೊರತು, ರಾಮ ಮಂದಿರ ನಿರ್ಮಾಣವನ್ನಲ್ಲ | Oneindia Kannada

ಪಕ್ಷದ ಮುಖಂಡ ಹಬೀಬ್ ಅವರು ಮಾತನಾಡಿ, ಮನ್ಸೂರ್ ಖಾನ್‌ನನ್ನು ಅರ್ಧ ದೋಚಿರುವುದೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಅಲ್ಪಸಂಖ್ಯಾತರ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿರುವ ಪ್ರಭಾವಿಗಳೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾರ ಮರ್ಜಿಗೂ ಒಳಗಾಗದೇ ಬಡ ಜನರಿಗೆ ನ್ಯಾಯ ಒದಗಿಸಬೇಕು, ಇಲ್ಲದಿದ್ದಲ್ಲಿ ಬಡ ಜನರ ಶಾಪ ನಿಮ್ಮೆಲ್ಲರನ್ನು ತಟ್ಟದೆ ಬಿಡುವುದಿಲ್ಲ ಎಂದು ನುಡಿದರು.

English summary
IMA Scam: AAP Karnataka demands distribute seized amount to victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X