ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ಹಗರಣ : ಸಿಬಿಐನಿಂದ ಸಾವಿರ ಪುಟದ ಚಾರ್ಜ್ ಶೀಟ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 09 : ಬಹುಕೋಟಿ ರೂಪಾಯಿ ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ 1000 ಪುಟದ ಜಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಎಸ್‌ಐಟಿಯಿಂದ ಕೆಲವು ದಿನಗಳ ಹಿಂದೆ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಲಾಗಿತ್ತು.

Recommended Video

ಐಎಂಎ ಹಗರಣದ ರೂವಾರಿ ಮನ್ಸೂರ್ ಖಾನ್ | Oneindia Kannada

ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಐಎಂಎ ಹಗರಣದ ಮೊದಲ ದೂರು ದಾಖಲಾಗಿ 90 ದಿನವಾಗುತ್ತಿದೆ. ಅವಧಿ ಮೀರಿದರೆ ಆರೋಪಿಗೆ ಜಾಮೀನು ದೊರೆಯುತ್ತದೆ. ಈ ಹಿನ್ನಲೆಯಲ್ಲಿ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.

ಧೂಳು ತಿನ್ನುತ್ತಿವೆ ಮನ್ಸೂರ್ ಐಷಾರಾಮಿ ಕಾರು!ಧೂಳು ತಿನ್ನುತ್ತಿವೆ ಮನ್ಸೂರ್ ಐಷಾರಾಮಿ ಕಾರು!

ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸುಮಾರು 1 ಸಾವಿರ ಪುಟದ ಜಾರ್ಜ್ ಶೀಟ್ ಸಲ್ಲಿಕೆ ಮಾಡಿರುವ ಸಿಬಿಐ ತನಿಖೆ ಮುಂದುವರೆಸಿದೆ. ಐಎಂಎ ಸಂಸ್ಥೆಯ ಸ್ಥಾಪಕ ಮನ್ಸೂರ್ ಖಾನ್ ಜಾರ್ಜ್ ಶೀಟ್‌ನಲ್ಲಿ ಮೊದಲ ಆರೋಪಿ.

ಐಎಂಎ ತನಿಖೆ ಕೈಗೆತ್ತಿಕೊಂಡ ಸಿಬಿಐ: 30 ಜನರ ವಿರುದ್ಧ ಎಫ್‌ಐಆರ್‌ಐಎಂಎ ತನಿಖೆ ಕೈಗೆತ್ತಿಕೊಂಡ ಸಿಬಿಐ: 30 ಜನರ ವಿರುದ್ಧ ಎಫ್‌ಐಆರ್‌

ima

ಬೆಂಗಳೂರು ನಗರದ ಜಿಲ್ಲಾಧಿಕಾರಿಯಾಗಿದ್ದ ವಿಜಯಶಂಕರ್, ಉಪವಿಭಾಗಾಧಿಕಾರಿ ಎಲ್‌. ಸಿ. ನಾಗರಾಜ್, ಗ್ರಾಮ ಲೆಕ್ಕಿಗ ಮಂಜುನಾಥ್, ಬಿಡಿಎ ಮುಖ್ಯ ಇಂಜಿನಿಯರ್ ಕುಮಾರ್ ಆರೋಪಿಗಳ ಪಟ್ಟಿಯಲ್ಲಿದ್ದಾರೆ.

ದುಬೈಗೆ ಹಾರುವ ಮುನ್ನ 38 ಕೆಜಿ ಚಿನ್ನ ಕರಗಿಸಿದ್ದ ಮನ್ಸೂರ್ ಖಾನ್ದುಬೈಗೆ ಹಾರುವ ಮುನ್ನ 38 ಕೆಜಿ ಚಿನ್ನ ಕರಗಿಸಿದ್ದ ಮನ್ಸೂರ್ ಖಾನ್

ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನೀಡಿರುವ ಹೇಳಿಕೆಗಳನ್ನು ಜಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವು ರಾಜಕಾರಣಿಗಳು, ಅಧಿಕಾರಿಗಳ ಹೆಸರನ್ನು ಆತ ಹೇಳಿದ್ದು, ಸಿಬಿಐ ವಿಚಾರಣೆ ಮುಂದುವರೆಸಿದೆ.

ಜೂನ್ 10ರಂದು ಐಎಂಎ ಹಗರಣದ ಕುರಿತು ಮೊದಲ ದೂರು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಬಳಿಕ ಕರ್ನಾಟಕ ಸರ್ಕಾರ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.

ಕರ್ನಾಟಕದಲ್ಲಿ ಸರ್ಕಾರ ಬದಲಾವಣೆಗೊಂಡು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಸರ್ಕಾರ ಪ್ರಕರರಣದ ತನಿಖೆಯನ್ನು ಸಿಬಿಐಗೆ ವಹಿಸಿತು. 30 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಂಡಿರುವ ಸಿಬಿಐ ತನಿಖೆಯನ್ನು ಕೈಗೊಂಡಿದೆ.

English summary
The Central Bureau of Investigation (CBI) which probing IMA scam filed a charge sheet against Mansoor Khan. The probe handover by SIT to CBI recently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X