ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ಹಗರಣ; ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08: ಬಹುಕೋಟಿ ರೂಪಾಯಿ ಐಎಂಎ ಹಗರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಸಿಬಿಐ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿಯಾಗಿದ್ದ ಎಲ್‌. ಸಿ. ನಾಗರಾಜ್‌ ಮತ್ತು ಗ್ರಾಮ ಲೆಕ್ಕಾಧಿಕಾರಿ ಎನ್. ಮಂಜುನಾಥ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಕರ್ನಾಟಕ ಸರ್ಕಾರ ಎಲ್. ಸಿ. ನಾಗರಾಜ್, ಎನ್. ಮಂಜುನಾಥ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಬಿ. ಎಂ. ವಿಜಯಶಂಕರ್ ವಿರುದ್ಧ ತನಿಖೆಗೆ ಒಪ್ಪಿಗೆ ನೀಡಿತ್ತು.

ಬಿ. ಎಂ. ವಿಜಯ ಶಂಕರ್ ಕೊರಳಿಗೆ ಐಎಂಎ ಸುತ್ತಿಕೊಂಡಿದ್ದು ಹೇಗೆ? ಬಿ. ಎಂ. ವಿಜಯ ಶಂಕರ್ ಕೊರಳಿಗೆ ಐಎಂಎ ಸುತ್ತಿಕೊಂಡಿದ್ದು ಹೇಗೆ?

ಜೂನ್ ತಿಂಗಳಿನಲ್ಲಿ ಬಿ. ಎಂ. ವಿಜಯ ಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಉಳಿದ ಇಬ್ಬರು ಆರೋಪಿಗಳ ವಿರುದ್ಧ ಈಗ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದೆ. ಐಎಂಎ ಸಂಸ್ಥಾಪಕ ಮನ್ಸೂರ್‌ ಖಾನ್‌ನಿಂದ ಇಬ್ಬರು ಲಂಚ ಪಡೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಐಎಂಎ ಹಗರಣ; ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ! ಐಎಂಎ ಹಗರಣ; ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ!

IMA Scam CBI Files Charge Sheet Against LC NagaraJ And Manjunath

ಐಎಂಎ ಪರವಾಗಿ ವರದಿ ನೀಡಲು ಎಲ್. ಸಿ. ನಾಗರಾಜ್ 4.5 ಕೋಟಿ ರೂ. ಲಂಚ ಪಡೆದಿದ್ದಾರೆ. ಎಲ್. ಸಿ. ನಾಗರಾಜ್ ಮತ್ತು ಮನ್ಸೂರ್ ಖಾನ್ ಪರಿಚಯ ಮಾಡಿಸಿದ್ದ ಗ್ರಾಮ ಲೆಕ್ಕಾಧಿಕಾರಿ ಎನ್. ಮಂಜುನಾಥ್ 10 ಲಕ್ಷ ಲಂಚ ಪಡೆದಿದ್ದಾರೆ ಎಂದು ಸಿಬಿಐ ಹೇಳಿದೆ.

ಬಂಧನದ ಭೀತಿಯಲ್ಲಿ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ? ಬಂಧನದ ಭೀತಿಯಲ್ಲಿ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ?

ಐಎಂಎ ಹಗರಣದಲ್ಲಿ ಕಂಪನಿಯ ಪರವಾಗಿ ವರದ ನೀಡಲು ಎಲ್. ಸಿ. ನಾಗರಾಜ್, ಜಿಲ್ಲಾಧಿಕಾರಿಯಾಗಿದ್ದ ಬಿ. ಎಂ. ವಿಜಯ್ ಶಂಕರ್, ಗ್ರಾಮ ಲೆಕ್ಕಿಗ ಎನ್. ಮಂಜುನಾಥ್ ಆರೋಪಿಯಾಗಿದ್ದರು. ಕಂಪನಿಯ ಪರವಾಗಿ ವರದಿ ನೀಡಲು ವಿಜಯ ಶಂಕರ್ 1.5 ಕೋಟಿ ರೂ. ಲಂಚ ಪಡೆದಿದ್ದಾರೆ ಎಂಬ ಆರೋಪವಿತ್ತು. ಜೂನ್‌ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಕರ್ನಾಟಕ ಸರ್ಕಾರ ಐಎಂಎ ಹಗರಣದ ತನಿಖೆಗೆ ಮೊದಲು ಎಸ್‌ಐಟಿ ರಚನೆ ಮಾಡಿತ್ತು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತನಿಖೆ ಸಿಬಿಐಗೆ ವರ್ಗಾವಣೆಯಾಗಿತ್ತು.

English summary
CBI which probing IMA Ponzi scam has submitted a charge-sheet against former sub-divisional officer L. C. Nagaraj and former village accountant N. Manjunath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X