ಐಎಂಎ ವಂಚಕ ಮನ್ಸೂರ್ ಖಾನ್ ಗೆ ಜಾಮೀನು: ಫೆ. 12 ರಂದು ಜೈಲಿನಿಂದ ಬಿಡುಗಡೆ!
ಬೆಂಗಳೂರು, ಫೆಬ್ರವರಿ 04: ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸಂಬಂಧಿಗೆ ಹೃದಯ ಸಂಬಂಧಿ ಕಾಯಿಲೆ ಇದೆಯಂತೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಪಡೆದಿರುವ ಐಎಂಎ ವಂಚನೆಯ ಪ್ರಮುಖ ಆರೋಪಿ ಮನ್ಸೂರ್ ಖಾನ್ ಇದೇ ಫೆಬ್ರವರಿ 12 ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
Recommended Video
ಅನಾರೋಗ್ಯದಿಂದ ಬಳಲುತ್ತಿರುವ ಮನ್ಸೂರ್ ಖಾನ್ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಮನ್ಸೂರ್ ಖಾನ್ ಬಳಲುತ್ತಿದ್ದು, ಈಗಾಗಲೇ ಹಲವು ಪ್ರಕರಣದಲ್ಲಿಜಾಮೀನು ದೊರೆತಿದೆ. ಇದನ್ನು ಪರಿಗಣಿಸಿ ಬಾಕಿ ಉಳಿದಿರುವ ನಾಲ್ಕು ಹಾಗೂ ಕೊನೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಖಾನ್ ಪರ ವಕೀಲರು ಮನವಿ ಮಾಡಿದ್ದರು. ಇದಕ್ಕೆ ಸಿಬಿಐ ವಿಶೇಷ ಅಭಿಯೋಜಕರಾದ ಪ್ರಸನ್ನಕುಮಾರ್ ಅವರು ಆಕ್ಷೇಪಣೆ ಸಲ್ಲಿಸಿದ್ದರು.
ಏಪ್ರಿಲ್ ವರೆಗೂ ಜಾಮೀನು ನೀಡದಂತೆ ಮನವಿ ಮಾಡಿದ್ದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ದಾಖಲಿಸಿದ್ದ ಇತರೆ ಪ್ರಕರಣಗಳಲ್ಲಿ ಮನ್ಸೂರ್ ಖಾನ್ ಗೆ ಜಮೀನು ಸಿಕ್ಕಿತ್ತು. ಇದನ್ನು ಪರಿಗಣಿಸಿ ಹೈಕೋರ್ಟ್ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರು ಮನ್ಸೂರ್ ಖಾನ್ ಗೆ ನಾಲ್ಕನೇ ಪ್ರಕರಣ ಹಾಗೂ ಕೊನೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಜಾಮೀನು ಫೆ. 12 ರಿಂದ ಅನ್ವಯ ಆಗುವಂತೆ ಜಾಮೀನು ನೀಡಿ ನೀಡಲಾಗಿದೆ.

ಫೆ. 12 ರಂದು ಬಿಡುಗಡೆ: ಹೃದಯ ಸಂಬಂಧಿ ಕಾಯಿಲೆಯಿಂದ ಮನ್ಸೂರ್ ಖಾನ್ ಫೆ. 12 ರಂದು ಬಿಡುಗಡಯಾಗಲಿದ್ದಾನೆ. ಹೈಕೋರ್ಟ್ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಪೂರೈಸಿದ ಬಳಿಕ ಬಿಡುಗಡೆ ಆದೇಶ ವನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸಲ್ಲಿಸಬೇಕು. ಈ ಪ್ರಕ್ರಿಯೆ ಮುಗಿದ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಕಾರಾಗೃಹ ಇಲಾಖೆಯ ಮೂಲಗಳು ಸ್ಪಷ್ಟಪಡಿಸಿವೆ.

ಐಎಂಎ ವಂಚನೆಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣ ಹಾಗೂ ಸಿಬಿಐ ದಾಖಲಿಸಿದ್ದ ಇತರೆ ಮೂರು ಪ್ರಕರಣಗಳಲ್ಲಿ ಮನ್ಸೂರ್ ಖಾನ್ ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಮನ್ಸೂರ್ ಖಾನ್ 2019 ಆಗಸ್ಟ್ ನಲ್ಲಿ ಬಂಧನಕ್ಕೆ ಒಳಗಾದ ಬಳಿಕ ಅನಾರೋಗ್ಯದ ಕಾರಣ ನೀಡಿದ್ದ. ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಚಿಕಿತ್ಸೆ ಕೂಡ ಪಡೆದಿದ್ದ. ನ್ಯಾಯಾಲಯದ ನಿರ್ದೇಶನ ಮೇರೆಗೆ ಮನ್ಸೂರ್ ಖಾನ್ ಇದ್ದ ಜೈಲಿನ ಬ್ಯಾರಕ್ ಗೂ ಬಿಗಿ ಭದ್ರತೆ ಕಲ್ಪಿಸಲಾಗಿತ್ತು ಇದೀಗ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿ ಮಹಮದ್ ಮನ್ಸೂರ್ ಖಾನ್ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾನೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications