ಐಎಂಎ ಪ್ರಕರಣ; ಮನ್ಸೂರ್ ಅಲಿ ಖಾನ್‌ಗೆ ಜಾಮೀನು
ಬೆಂಗಳೂರು, ಅಕ್ಟೋಬರ್ 28 : ಬಹುಕೋಟಿ ರೂಪಾಯಿ ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್‌ಗೆ ಜಾಮೀನು ಸಿಕ್ಕಿದೆ. ಹಗರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.
ಬುಧವಾರ ಕರ್ನಾಟಕ ಹೈಕೋರ್ಟ್ ಮನ್ಸೂರ್ ಅಲಿ ಖಾನ್‌ಗೆ ಷರತ್ತು ಬದ್ಧ ಜಾಮೀನು ನೀಡಿದೆ. ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಕ್ಕಿದ್ದು, ಬಿಡುಗಡೆ ಭಾಗ್ಯವಿಲ್ಲ.
5 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ಜಾಮೀನು ನೀಡಲಾಗಿದೆ. ತನಿಖೆಗೆ ಸಹಕಾರ ನೀಡಬೇಕು, ಸಾಕ್ಷ್ಯ ನಾಶ ಮಾಡಬಾರದು ಎಂದು ಷರತ್ತು ಹಾಕಲಾಗಿದೆ.

ಜಾಮೀನು ನೀಡುವಾಗ ನ್ಯಾಯಾಲಯ ಆರೋಪಿಯೇ ಪೊಲೀಸರಿಗೆ ಶರಣಾಗಿದ್ದ. ಆತನ ಪಾಸ್ ಪೋರ್ಟ್ ಪೊಲೀಸರ ವಶದಲ್ಲಿದೆ. ಆದ್ದರಿಂದ, ದೇಶ ತೊರೆಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಜಾಮೀನು ಸಿಗಬೇಕು : ಜಾರಿ ನಿರ್ದೇಶನಾಲಯ ದಾಖಲು ಮಾಡಿದ್ದ ಪ್ರಕರಣದಲ್ಲಿ ಮನ್ಸೂರ್ ಅಲಿ ಖಾನ್‌ಗೆ ಜಾಮೀನು ನೀಡಲಾಗಿದೆ. ಆದರೆ, ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಸಿಗಬೇಕಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮನ್ಸೂರ್ ಅಲಿ ಖಾನ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದರೂ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ.












Click it and Unblock the Notifications