ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ಪ್ರಕರಣ; ಮನ್ಸೂರ್ ಅಲಿ ಖಾನ್‌ಗೆ ಜಾಮೀನು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 28 : ಬಹುಕೋಟಿ ರೂಪಾಯಿ ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್‌ಗೆ ಜಾಮೀನು ಸಿಕ್ಕಿದೆ. ಹಗರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಬುಧವಾರ ಕರ್ನಾಟಕ ಹೈಕೋರ್ಟ್ ಮನ್ಸೂರ್ ಅಲಿ ಖಾನ್‌ಗೆ ಷರತ್ತು ಬದ್ಧ ಜಾಮೀನು ನೀಡಿದೆ. ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಕ್ಕಿದ್ದು, ಬಿಡುಗಡೆ ಭಾಗ್ಯವಿಲ್ಲ.

ಐಎಂಎ ಹಗರಣ; ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಐಎಂಎ ಹಗರಣ; ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್

5 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ಜಾಮೀನು ನೀಡಲಾಗಿದೆ. ತನಿಖೆಗೆ ಸಹಕಾರ ನೀಡಬೇಕು, ಸಾಕ್ಷ್ಯ ನಾಶ ಮಾಡಬಾರದು ಎಂದು ಷರತ್ತು ಹಾಕಲಾಗಿದೆ.

ಬಿ. ಎಂ. ವಿಜಯ ಶಂಕರ್ ಕೊರಳಿಗೆ ಐಎಂಎ ಸುತ್ತಿಕೊಂಡಿದ್ದು ಹೇಗೆ? ಬಿ. ಎಂ. ವಿಜಯ ಶಂಕರ್ ಕೊರಳಿಗೆ ಐಎಂಎ ಸುತ್ತಿಕೊಂಡಿದ್ದು ಹೇಗೆ?

IMA Scam High Court Grants Bail To Mansoor Ali Khan

ಜಾಮೀನು ನೀಡುವಾಗ ನ್ಯಾಯಾಲಯ ಆರೋಪಿಯೇ ಪೊಲೀಸರಿಗೆ ಶರಣಾಗಿದ್ದ. ಆತನ ಪಾಸ್ ಪೋರ್ಟ್ ಪೊಲೀಸರ ವಶದಲ್ಲಿದೆ. ಆದ್ದರಿಂದ, ದೇಶ ತೊರೆಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಐಎಂಎ ಹಗರಣದ ವಿಚಾರಣೆ ವಿಶೇಷ ನ್ಯಾಯಾಲಯ ಸ್ಥಾಪನೆ ಐಎಂಎ ಹಗರಣದ ವಿಚಾರಣೆ ವಿಶೇಷ ನ್ಯಾಯಾಲಯ ಸ್ಥಾಪನೆ

ಜಾಮೀನು ಸಿಗಬೇಕು : ಜಾರಿ ನಿರ್ದೇಶನಾಲಯ ದಾಖಲು ಮಾಡಿದ್ದ ಪ್ರಕರಣದಲ್ಲಿ ಮನ್ಸೂರ್ ಅಲಿ ಖಾನ್‌ಗೆ ಜಾಮೀನು ನೀಡಲಾಗಿದೆ. ಆದರೆ, ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಸಿಗಬೇಕಿದೆ.

Recommended Video

Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮನ್ಸೂರ್ ಅಲಿ ಖಾನ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದರೂ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ.

English summary
Karnataka high court granted conditional bail to Mohammed Mansoor Ali Khan who was prime accused in the IMA scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X